ಹುಬ್ಬಳ್ಳಿ: ‘ಶಿಕ್ಷಣ ಕೇವಲ ಪಠ್ಯ ಪುಸ್ತಕದ ಅಧ್ಯಯನವಲ್ಲ. ಅದು ಬದುಕಿನ ಸಮಸ್ಯೆಗಳ ಪರಿಹರಿಸುವ ಮಾರ್ಗವಾಗಿದೆ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಬುಡರಸಿಂಗಿಯ ಕೆಎಸ್ಎಸ್ಎಸ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಶುಕ್ರವಾರ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.

‘ನಮ್ಮ ಭೌತಿಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಶಿಕ್ಷಣ ಸಹಕಾರಿಯಾಗಿದೆ. ಬೌದ್ಧಿಕ ಬೆಳವಣಿಗೆಗೂ ಪೂರಕವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನೂ ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಸತ್ಯಮೂರ್ತಿ ಆಚಾರ್ಯರು ಮಾತನಾಡಿದರು. ಸಂಸ್ಥೆಯ ಪ್ರಮುಖರಾದ ಶ್ರೀಕಾಂತ ಕೆಮ್ತೂರ್, ಗೋಪಾಲ ಕುಲಕರ್ಣಿ, ಮಹೇಂದ್ರ ಜೆ.ಎ., ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-1073151463

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.