ಹುಬ್ಬಳ್ಳಿ: ‘ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ ಮತ್ತು ಕ್ರಿಯಾಶೀಲತೆಯ ಜೀವನಶೈಲಿ ಅತ್ಯಗತ್ಯ’ ಎಂದು ಬಾಲಾಜಿ ಆಸ್ಪತ್ರೆಯ ಚೇರ್ಮೆನ್, ನರರೋಗ ತಜ್ಞ ಡಾ.ಕ್ರಾಂತಿಕಿರಣ ಹೇಳಿದರು.

ವಿದ್ಯಾನಗರದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ವೃದ್ಧಾಪ್ಯದಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಗಳು’ ಕುರಿತು ಅವರು ಮಾತನಾಡಿದರು.

‘ವೃದ್ಧಾಪ್ಯದಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕ್ರಮೇಣ ಇಳಿಕೆಯಾಗಲಿದ್ದು, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಸಾಮಾನ್ಯವಾಗಿ ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಆದ್ದರಿಂದ ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರಿಯಾಶೀಲ ಜೀವನಶೈಲಿ ರೂಢಿಸಿಕೊಳ್ಳುವುದು ಅತ್ಯಗತ್ಯವಾಗಿದೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಶೇ 15 ರಷ್ಟು ಜನರು ಕನಿಷ್ಠ ಒಂದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ವೃದ್ದಾಪ್ಯದಲ್ಲಿ ಒಂಟಿತನದಿಂದ ಕಾಡುವ ಖಿನ್ನತೆ ಮತ್ತು ಆತಂಕ ನಿವಾರಿಸಲು ಸಮಾಜಮುಖಿ ಕಾರ್ಯಗಳತ್ತ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಂಘದ ಅಧ್ಯಕ್ಷ ಎಂ.ಕೆ.ನಾಯ್ಕರ್, ಉಪಾಧ್ಯಕ್ಷ ಪ್ರೊ.ಕೆ.ಎಸ್.ಕೌಜಲಗಿ, ಕಾರ್ಯದರ್ಶಿ ಎಸ್.ಟಿ.ಭೈರಪ್ಪನವರ, ಖಜಾಂಚಿ ಸುಭಾಶ್ಚಂದ್ರ ಛತ್ರದ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-24-1113980842

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.