ಹುಬ್ಬಳ್ಳಿ: ಇಲ್ಲಿನ ತಾರಿಹಾಳ ರಸ್ತೆಯಲ್ಲಿ ಡಿ.ಪಿ. ಮಧೂರಕರ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಶ್ರೀ ಗುರು ಗೋರಕ್ಷನಾಥ ಕನ್ನಡ ಮಾಧ್ಯಮ ಬಾಲಕರ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ವಸತಿ ನಿಲಯಕ್ಕೆ 2026–27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್ ಖಜಾಂಚಿ ಪಾಂಡುರಂಗ ಮಧೂರಕರ, ‘ಮಕ್ಕಳಿಗೆ ಉಚಿತ ಶಿಕ್ಷಣ, ಪಠ್ಯಪುಸ್ತಕ, ಸಮವಸ್ತ್ರ, ವಸತಿ ನಿಲಯದಲ್ಲಿ ಉಚಿತ ವಸತಿ, ಊಟ ಸೌಲಭ್ಯವಿರುತ್ತದೆ. ಜೂನ್ 5ರ ವರೆಗೆ ಪ್ರವೇಶ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ’ ಎಂದರು.

ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎನ್. ಕಾಟೆನವರ ಮಾತನಾಡಿ, ‘ಎಲ್ಲ ಸಮುದಾಯದವರಿಗೂ ಪ್ರವೇಶ ಲಭ್ಯವಿದ್ದು, ವಿದ್ಯಾರ್ಥಿಯು ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಜರುಪಡಿಸಬೇಕು. ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತರಬೇಕು’ ಎಂದರು. ಮಾಹಿತಿಗೆ 99864 56861, 99648 59350 ಸಂಖ್ಯೆ ಸಂಪರ್ಕಿಸಬಹುದು. ಯು.ಎಸ್. ಚಿಂದಿ, ಶ್ರೀಶೈಲ ಬಳ್ಳೊಳ್ಳಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-51378789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.