ಹುಬ್ಬಳ್ಳಿ: ವಿಶ್ವ ತಲೆ ಗಾಯ ಜಾಗೃತಿ ದಿನಾಚರಣೆ ಪ್ರಯುಕ್ತ ನಗರದ ಬಾಲಾಜಿ ಆಸ್ಪತ್ರೆ ಮತ್ತು ಕನಕದಾಸ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏ.2ರಂದು ಬೆಳಿಗ್ಗೆ 9.30ಕ್ಕೆ ಆರೋಗ್ಯ ಅರಿವು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ನರರೋಗ ತಜ್ಞ ಡಾ.ಕ್ರಾಂತಿಕಿರಣ ಅವರು, ಅಪಘಾತ ಮತ್ತು ಮಿದುಳಿನ ಗಾಯಗಳಿಂದ ರಕ್ಷಿಸಿಕೊಳ್ಳುವ ವಿಧಾನ ಮತ್ತು ಮಿದುಳಿನ ಮಹತ್ವದ ಕುರಿತು ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

ಕನಕದಾಸ ಶಿಕ್ಷಣ ಸಂಸ್ಥೆಯ ಚೇರ್ಮನ್ ರವೀಂದ್ರನಾಥ್ ದಂಡಿನ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಬಿ.ಜಿ.ಮಡ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಅಕ್ಷಯಪಾರ್ಕ್ ಬಳಿಯ ಸಂತೆ ಮೈದಾನದಲ್ಲಿ ಏ.10ರಂದು ನವಯುಗ ಸಂಘಟನೆ ವತಿಯಿಂದ 24ನೇ ವರ್ಷದ ಸರ್ವಧರ್ಮ ಸಾಮೂಹಿಕ ವಿವಾಹ ಮತ್ತು ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಧು–ವರರಿಗೆ ಸರ್ಕಾರದ ವಿವಾಹ ಆದರ್ಶ ಯೋಜನೆ ಅಡಿಯಲ್ಲಿ ₹10 ಸಾವಿರ. ಸರಳ ವಿವಾಹ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನವಜೋಡಿಗೆ ₹50 ಸಾವಿರ. ಅಂತರಜಾತಿ ವಿವಾಹ ಆಗುವವರಿಗೆ ₹3ಲಕ್ಷವನ್ನು ಸರ್ಕಾರದಿಂದ ಕೊಡಿಸಲಾಗುವುದು. ಮಾಹಿತಿ, ನೋಂದಣಿಗೆ ಮೊಬೈಲ್: 94492 50081 ಸಂಪರ್ಕಿಸಬಹುದು ಎಂದು ನವಯುಗ ಸಂಘಟನೆಯ ಅಧ್ಯಕ್ಷ ಕೃಷ್ಣಾ ಮ.ಗಂಡಗಾಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-24-1508747576

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.