ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಎಲ್ಐಸಿ ಗೋಲ್ಡನ್ ಜುಬಿಲಿ ಫೌಂಡೇಶನ್ ವತಿಯಿಂದ ಸೋಮವಾರ ಸಂಚಾರಿ ರಕ್ತ ಸಂಗ್ರಹ ವಾಹನವನ್ನು ಹಸ್ತಾಂತರಿಸಲಾಯಿತು.

ಎಲ್ಐಸಿ ಆಫ್ ಇಂಡಿಯಾದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಬಿ.ಎಸ್.ಚಕ್ರವರ್ತಿ ಮಾತನಾಡಿ, ‘ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳನ್ನು ನಡೆಸಲು ಈ ವಾಹನದಿಂದ ಅನುಕೂಲವಾಗಲಿದೆ’ ಎಂದರು.

ಉದ್ಯಮಿ ಗೋವಿಂದ ಜೋಶಿ ಮಾತನಾಡಿ, ‘ಕೆಎಂಸಿಆರ್ಐ ಅತ್ಯುತ್ತಮ ಸೇವೆ ನೀಡುತ್ತಿದೆ. ಎಲ್ಐಸಿ ಗೋಲ್ಡನ್ ಜುಬಿಲಿ ಫೌಂಡೇಶನ್ ವತಿಯಿಂದ ನೀಡಿರುವ ಸಂಚಾರಿ ರಕ್ತ ಸಂಗ್ರಹ ವಾಹನದ ಸದ್ಬಳಕೆಯಾಗಬೇಕು’ ಎಂದು ಹೇಳಿದರು.

ಕೆಎಂಸಿಆರ್ಐ ನಿರ್ದೇಶಕ ಈಶ್ವರ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ. ಸೂರ್ಯಕಾಂತ ಕಲ್ಲೂರಾಯ, ವೈದ್ಯಕೀಯ ಅಕ್ಷಕ ಡಾ. ಈಶ್ವರ ಹಸಬಿ, ಡಾ. ಎಸ್. ರಾಜಾಶಂಕರ, ಎಲ್ಐಸಿ ಧಾರವಾಡ ಮಾರ್ಕೆಟಿಂಗ್ ವ್ಯವಸ್ಥಾಪಕ ಎಸ್. ಪ್ರಮೋದ, ರೋಟರಿ ಕ್ಲಬ್ ಧಾರವಾಡದ ಅಧ್ಯಕ್ಷ ಲಕ್ಷ್ಮೀಕಾಂತ ನಾಯಕ್, ಆರ್ಎಂಒ ಡಾ. ನಾಗರಾಜ ಚಾಂದಿ, ಡಾ. ಸುನಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-1499949947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.