ಹುಬ್ಬಳ್ಳಿ: ‘ರಾಜ್ಯ ಸರ್ಕಾರ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಮುಂದಾಗಿದ್ದು, ಇದರಿಂದ ಅವುಗಳ ಸುತ್ತಲಿನ ಎಂಟು ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಅನುದಾನಿತ ಶಾಲೆಗಳು ಮುಚ್ಚಲಿವೆ. ಹೀಗಾಗಿ ಶಿಕ್ಷಕರ ಸಂಘಗಳು ಎಚ್ಚೆತ್ತುಕೊಂಡು ಈಗಲೇ ಹೋರಾಟ ರೂಪಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಮಾಧ್ಯಮಿಕ ಶಿಕ್ಷಕರ ನೌಕರರ ಸಂಘದ ಹುಬ್ಬಳ್ಳಿ ಘಟಕದ ನೇತೃತ್ವದಲ್ಲಿ ಶನಿವಾರ ಏರ್ಪಡಿಸಿದ್ದ ರಾಜ್ಯ ಘಟಕದ ಕೇಂದ್ರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಕೆಪಿಎಸ್ ಶಾಲೆ ಆರಂಭದಿಂದಾಗುವ ಸಾಧಕ, ಬಾಧಕಗಳ ಕುರಿತು ಚರ್ಚಿಸಬೇಕು. ಬೇರೆ ಬೇರೆ ಕಡೆ ಇರುವ ಶಾಲೆಗಳನ್ನು ಕೆಪಿಎಸ್ ವ್ಯಾಪ್ತಿಗೆ ತರುವುದು ಕಾನೂನಿಗೆ ವಿರುದ್ಧವಾಗಿದೆ. ಆದರೆ, ಯಾರೂ ಇದನ್ನು ವಿರೋಧಿಸುತ್ತಿಲ್ಲ’ ಎಂದರು.

ಶಾಲಾ ನೌಕರರ ಹಾವೇರಿ ಜಿಲ್ಲಾ ಸಂಘದ ಗೌರವಾಧ್ಯಕ್ಷ ಎಚ್.ಪಿ. ಬಣಕಾರ ಮಾತನಾಡಿ, ‘ಸರ್ಕಾರದ ನಿರ್ಣಯದಿಂದಾಗಿ ಅನುದಾನಿತ ಶಾಲೆಗಳು ಸೌಲಭ್ಯದಿಂದ ವಂಚಿತವಾಗುತ್ತಿವೆ. ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸರಿಯಾಗಿ ಸೌಲಭ್ಯಗಳು ಸಿಗುತ್ತಿಲ್ಲ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಕಟ್ಟಡ ನಿರ್ಮಾಣಕ್ಕೆ ಹಾವೇರಿ ಜಿಲ್ಲೆ ಹಾಗೂ ವಿವಿಧ ತಾಲ್ಲೂಕು ಘಟಕದಿಂದ ₹14.85 ಲಕ್ಷ ದೇಣಿಗೆಯ ಚೆಕ್ ಅನ್ನು ನೀಡಲಾಯಿತು.

2006 ನಂತರ ನೇಮಕಗೊಂಡ ನೌಕರರಿಗೆ ಜುಲೈ ಕೊನೆ ವಾರದೊಳಗೆ ಒಪಿಎಸ್ ಯೋಜನೆ ಜಾರಿಗೊಳಿಸಬೇಕು, 1-4-2006ರಲ್ಲಿ ನೇಮಕಗೊಂಡ ಅನುದಾನಿತ ನೌಕರರಿಗೆ ಒಪಿಎಸ್ ಅನುಷ್ಠಾನ ಮಾಡಬೇಕು, ಕೆಪಿಎಸ್ ಶಾಲೆ ಬಗ್ಗೆ ಕಾನೂನು ಸಲಹೆ ಪಡೆದು ಹೋರಾಟ ರೂಪಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಜಿ.ಆರ್. ಭಟ್, ಪ್ರಭಾಕರ ಭಟ್, ಜಿ.ಎಸ್.ಹುದ್ದಾರ, ಎನ್.ಎಂ.ಸವಣೂರ, ಎಲ್.ಎಂ.ಹೆಗಡೆ, ಎಂ.ಕೆ.ಲಮಾಣಿ, ಎ.ಎಸ್.ಪಾಟೀಲ, ಕುಂದೂರ, ಅಂಗಡಿ, ಹುಕ್ಕೇರಿ ಸಂಭಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-4647874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.