ಹುಬ್ಬಳ್ಳಿ: ‘ದ್ಯಾವಪ್ಪನವರ ಕೊರವಿ ಸಿದ್ನಾಳ ಎಜುಕೇಷನ್ ಟ್ರಸ್ಟ್ನ ಚೇತನ್ ಬಿಸಿನೆಸ್ ಸ್ಕೂಲ್ ವತಿಯಿಂದ ಮೇ 14ರಿಂದ 16ರವರೆಗೆ ‘ಚಕ್ರವ್ಯೂಹ–2ಕೆ26’ ಮ್ಯಾನೇಜ್ಮೆಂಟ್ ಉತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಸ್ಕೂಲ್ನ ನಿರ್ದೇಶಕ ವಿ.ಎಂ. ಕೊರವಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 14ರಂದು ಬೆಳಿಗ್ಗೆ 10 ಗಂಟೆಗೆ ಉದ್ಯಮಿ ವಿ.ಎಸ್.ವಿ. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಜದಗೀಶ ದ್ಯಾವಪ್ಪನವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

‘25ಕ್ಕೂ ಹೆಚ್ಚು ಕಾಲೇಜುಗಳಿಂದ 180ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಬಿಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಎ ವಿದ್ಯಾರ್ಥಿಗಳಿಗಾಗಿ ಫೈನಾನ್ಸ್, ಮಾರ್ಕೆಟಿಂಗ್, ಮಾನವ ಸಂಪನ್ಮೂಲ, ವಿಡಿಯೊಗ್ರಫಿ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗುವುದು’ ಎಂದು ಹೇಳಿದರು.

‘ಕೃತಕ ಬುದ್ಧಿಮತ್ತೆಯಿಂದಾಗಿ (ಎಐ) ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿದ್ಯಾರ್ಥಿಗಳು ಕೌಶಲ ಕಲಿಯದಿದ್ದರೆ ಉದ್ಯೋಗ ಪಡೆಯುವಾಗ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಮ್ಯಾನೇಜ್ಮೆಂಟ್ ಕೌಶಲ, ಸಂವಹನ ಕೌಶಲ, ಎಐ ತಂತ್ರಜ್ಞಾನ ಕಲಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ ಮುರುಡೇಶ್ವರ, ವಿದ್ಯಾರ್ಥಿಗಳಾದ ಕಾವೇರಿ, ಮೋಹಿತ್, ಆದಿತ್ಯಾ, ವರ್ಷಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-86800558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.