ಹುಬ್ಬಳ್ಳಿ: ‘ಔಷಧೀಯ ಸಸ್ಯಗಳ ನಾಶವು ಮಾನವನ ಜೀವನದ ಮೇಲೆ ನೇರ ಪರಿಣಾಮ ಉಂಟುಮಾಡುತ್ತದೆ’ ಎಂದು ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪಿ.ಎಲ್. ತೆವರಿ ಕಳವಳ ವ್ಯಕ್ತಪಡಿಸಿದರು.

ನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೊಟೆಕ್ನಾಲಜಿ ಸಭಾಂಗಣದಲ್ಲಿ ನಡೆದ ‘ಔಷಧೀಯ ಸಸ್ಯಗಳ ಸಂರಕ್ಷಣೆ, ಕೃಷಿ, ಮೌಲ್ಯವರ್ಧನೆ ಮತ್ತು ಸುಸ್ಥಿರ ಬಳಕೆ’ ಕುರಿತ ರಾಷ್ಟ್ರೀಯ ಸಮ್ಮೇಳನದ ಎರಡನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದರು.

‘ದೇಶದಲ್ಲಿ ಔಷಧೀಯ ಗಿಡಮೂಲಿಕೆಗಳು ವೇಗವಾಗಿ ಅಳಿವಿನ ಅಂಚಿಗೆ ತಲುಪುತ್ತಿವೆ. ಅರಣ್ಯ ನಾಶವಾದರೆ ಔಷಧೀಯ ಸಸ್ಯಗಳೂ ಅಳಿಯುತ್ತವೆ. ಇದರಿಂದ ಮಾನವ ಜೀವನ ಅಪಾಯಕ್ಕೆ ಸಿಲುಕುತ್ತದೆ. ಸಾಪ್ರದಾಯಿಕ ಹಾಗೂ ವೈಜ್ಞಾನಿಕ ಕೃಷಿ ವಿಧಾನಗಳ ಮೂಲಕ ಔಷಧೀಯ ಸಸ್ಯಗಳನ್ನು ಬೆಳೆಯಬೇಕು’ ಎಂದರು.

ಕಪ್ಪತ್ತಗುಡ್ಡದ ನಂದಿವೇರಿ ಸಂಸ್ಥಾನಮಠದ ಶಿವಕುಮಾರ ಸ್ವಾಮೀಜಿ, ‘ಪಶ್ಚಿಮಘಟ್ಟ ಮತ್ತು ಕಪ್ಪತ್ತಗುಡ್ಡ ಪ್ರದೇಶದ ಅಮೂಲ್ಯ ಸಸ್ಯ ಸಂಪತ್ತು ಅಪಾಯದಲ್ಲಿದೆ. ಅದರ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕಿದೆ’ ಎಂದು ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸ್ಟೇಟ್ ಸ್ಯಾಂಡಲ್ವುಡ್ ಮತ್ತು ಟ್ರೀ ಕಲ್ಚರ್ ಅಸೋಸಿಯೇಷನ್ ಗೌರವಾಧ್ಯಕ್ಷ ಕೆ. ಅಮರನಾರಾಯಣ, ನಿಡಸೋಸಿಯ ನಿಜಲಿಂಗೇಶ್ವರ ಸ್ವಾಮೀಜಿ, ಸಂಜೀವಿನಿ ಆಯುರ್ವೇದ ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಶ್ರೀನಿವಾಸ ಬನ್ನಿಗೋಳ, ಸಮ್ಮೇಳನದ ಸಂಯೋಜಕ ಎಂ.ಆರ್. ಪಾಟೀಲ,ಬಾಲಚಂದ್ರ ಜಾಬಶೆಟ್ಟಿ, ಚರಂತಯ್ಯ ಹಿರೇಮಠ, ಪ್ರಶಾಂತ ಎ.ಎಸ್., ಅನಿತಾ ಕಡಗದ, ಬಿ.ಡಿ. ಹುದ್ದಾರ,ಗುರುನಾಥ ಹೂಗಾರ, ದೇವರೆಡ್ಡಿ ಅಗಸಿನಕೊಪ್ಪ, ಬಿ.ಎಂ. ನಾಗಭೂಷಣ, ರಾಜೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-878811538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.