ಹುಬ್ಬಳ್ಳಿ: ಇಲ್ಲಿನ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ (ಜೆಸಿಇಟಿ) ಎನ್ಎಸ್ಎಸ್ ವಿದ್ಯಾರ್ಥಿಗಳು ಉಣಕಲ್ ಪ್ರದೇಶದ ಕೊಕಟೆ ಹಾಗೂ ಐಜಿ ಹಿರೇಗೌಡರ್ ಸರ್ಕಾರಿ ಶಾಲೆ ಹಾಗೂ ಕಾಲೇಜಿನ ಪುನರುಜ್ಜೀವನ ಕಾರ್ಯ ಕೈಗೊಂಡರು.

‘ಯುವಶಕ್ತಿ ಕಾರ್ಯದಲ್ಲಿ’ ಎಂಬ ಘೋಷಣೆಯೊಂದಿಗೆ ವಿದ್ಯಾರ್ಥಿಗಳು ಶಾಲೆಯ ಪರಿಸರದಲ್ಲಿ ಬಣ್ಣ ಹಚ್ಚಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯ ನೆರವೇರಿಸಿದರು.

ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಪ್ರಶಾಂತ್ ಬಣಕಾರ್ ಚಾಲನೆ ನೀಡಿದರು. ಐಜಿ ಹಿರೇಗೌಡರ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶಿವಾನಂದ ಹೆಬಸೂರ್, ಶಿವಣ್ಣ ಹಂಗರಕಿ, ಕೊಕಟೆ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಹಾಗೂ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-24-1051653289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.