ಹುಬ್ಬಳ್ಳಿ: ‘ನೀಟ್ ರದ್ದುಪಡಿಸಿ, ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಮೊದಲಿನಂತೆ ಸಿಇಟಿ ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ಆಗ್ರಹಿಸಿ ಜೂನ್ 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ರಾಜ್ಯ ಘಟಕದ ಕಾರ್ಯದರ್ಶಿ ವಿಶಾಲ ಮಾನೆ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ನೀಟ್ಗೆ ಸಿದ್ಧತೆ ನಡೆಸುತ್ತಿರುವವರು ಸೇರಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಕಳೆದ ಎರಡ್ಮೂರು ವರ್ಷಗಳಲ್ಲಿ ಎರಡು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ವೈಫಲ್ಯ ಕಾರಣ. ಇದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.

‘ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವುದರಿಂದ ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಗಗನಕುಸುಮವಾಗಿದೆ’ ಎಂದರು.

‘ಪರೀಕ್ಷೆಗೆ ಸಂಬಂಧಿಸಿದ ಒತ್ತಡದಿಂದಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್ಸಿಆರ್ಬಿ) ವರದಿ ಅನ್ವಯ 2023ರಲ್ಲಿ ದೇಶದಲ್ಲಿ 13,892 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಇನ್ನೂ ಹೆಚ್ಚುತ್ತಿದೆ’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ನೀಟ್ ವ್ಯವಸ್ಥೆ ಮರುಪರಿಶೀಲಿಸಿ, ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಬೇಕು’ ಎಂದರು.

ಕಾರ್ತಿಕ್ ಕಾಡದೇವರಮಠ, ಕಲ್ಮೇಶ ಉಳ್ಳಾಗಡ್ಡಿ, ಚಂದ್ರಶೇಖರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-2070881439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.