ಹುಬ್ಬಳ್ಳಿ: ಬೇಸಿಗೆ ರಜೆ ಮುಗಿಸಿ ಶಾಲೆಗೆ ಬಂದ ಮಕ್ಕಳಿಗೆ ಸೋಮವಾರ ಭವ್ಯ ಸ್ವಾಗತ ಕೋರಲಾಯಿತು. ನಗರದ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ ಮಕ್ಕಳ ಕಲರವ ಏರ್ಪಟ್ಟಿತ್ತು.

ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿತ್ತು. ಶಾಲೆಗಳ ಎದುರು ರಂಗೋಲಿ ಬಿಡಿಸಿ, ತೋರಣ ಕಟ್ಟಲಾಗಿತ್ತು. ಮಕ್ಕಳಿಗೆ ಗುಲಾಬಿ ಹೂವು, ಚಾಕೊಲೇಟ್, ಸಿಹಿ ವಿತರಿಸಿ ಸ್ವಾಗತಿಸಲಾಯಿತು. ವಿವಿಧೆಡೆ ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ವತಿಯಿಂದ ಘಂಟಿಕೇರಿಯ ನೇತಾಜಿ ಸುಭಾಷ್ ಚಂದ್ರಬೋಷ್ ಆವಾಸಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕ–ಶಿಕ್ಷಕರ ಮಹಾಸಭೆ ಆಯೋಜಿಸಲಾಗಿತ್ತು.

ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ ಅವರು ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಶಾಸಕರ ಮಾದರಿ ಬಾಲಕರ ಪ್ರಾಥಮಿಕ ಶಾಲೆ ನಂ. 5ಕ್ಕೆ ಒಂದನೇ ತರಗತಿ ಪ್ರವೇಶ ಪಡೆಯಲು ಬಂದ ಮಗುವನ್ನು ವೇದಿಕೆ ಮೇಲೆ ಕೂರಿಸಿಕೊಂಡು, 2026–27ನೇ ದಾಖಲಾತಿಗೆ ಚಾಲನೆ ನೀಡಿದರು. ನಂತರ ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಸಸಿ ನೀಡಿ ಸನ್ಮಾನಿಸಿದರು.

‘ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸಾಕಷ್ಟು ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಪರಿಶ್ರಮಪಟ್ಟು ಓದಿದರೆ ಉನ್ನತ ಹುದ್ದೆ ಪಡೆಯಬಹುದು’ ಎಂದು ಮಹೇಶ ಗಸ್ತೆ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಬಸವರಾಜ ನಾಲತವಾಡ ಅವರು, ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯ, ಶಿಕ್ಷಕರ ಗುಣಮಟ್ಟ ಮತ್ತು ಪ್ರಸಕ್ತ ಸಾಲಿನ ದ್ವಿಭಾಷಾ ಬೋಧನೆಯ ವೈಶಿಷ್ಟ್ಯತೆ ಬಗ್ಗೆ ತಿಳಿಸಿದರು. ಮಕ್ಕಳನ್ನು ಪಾಲಕರು ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗಬೇಕು’ ಎಂದರು.

ಶಹರ ಬಿಇಒ ಎಚ್.ಎಂ. ಫಡ್ನೇಶಿ, ಕ್ಷೇತ್ರ ಸಮನ್ವಯಾಧಿಕಾರಿ ಅನುಸೂಯಾ ಯಕ್ಕುಂಡಿ, ಕನ್ನಡ ವಿಷಯ ಪರಿವೀಕ್ಷಕಿ ರೇಣುಕಾ ಇಂಗಳಗಿ, ಡಯಟ್ ಉಪನ್ಯಾಸಕರಾದ ಕುಮಾರ ಹುಲಗೂರ, ಎಸ್.ಎಸ್. ಪಾಟೀಲ್, ಎಂ.ಎಚ್. ಜಂಗ್ಲಿ, ಭೀಮಪ್ಪ ಅಂಬಿಗೇರ, ವನಿತಾ ಆರ್., ಶೀಲಾ ಪಿ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-279527393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.