ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದ ಕಲಿಕಾ ಅವಧಿ ಜೂನ್ 1ರಿಂದ ಆರಂಭವಾಗಲಿದ್ದು, ನಗರದ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಮಕ್ಕಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿವೆ.

ಈಗಾಗಲೇ ಶಾಲಾ ಆವರಣ ಶುಚಿಗೊಳಿಸಿ, ತರಗತಿ ಕೊಠಡಿಗಳನ್ನು ಕಲಿಕೆಗೆ ಸಿದ್ಧಪಡಿಸಲಾಗಿದೆ. ಶಾಲೆಯ ಪ್ರವೇಶ ದ್ವಾರ, ತರಗತಿ ಕೊಠಡಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಕೆಲವು ಶಾಲೆಗಳ ಧ್ವಜ ಕಟ್ಟೆ ಹಾಗೂ ಪ್ರವೇಶ ದ್ವಾರದ ಎದುರು ಬಣ್ಣ ಬಣ್ಣದ ರಂಗೋಲಿ ಹಾಕಿ, ಮಕ್ಕಳ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುತ್ತಿದ್ದು, ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿದೆ. ಮೊದಲ ಎರಡು ಅವಧಿಗಳಲ್ಲಿ ಸ್ವಾಗತ ಕೋರಿ, ಮೂರನೇ ಅವಧಿಯಿಂದ ಪಾಠ ಬೋಧನೆ ಆರಂಭಿಸಲು ಮುಖ್ಯಶಿಕ್ಷಕರಿಗೆ ಅಧಿಕಾರಿಗಳು ಸೂಚನೆ ನಿಡಿದ್ದಾರೆ.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಘಂಟಿಕೇರಿ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 10ರ ವೇಳೆ ಸಾಂಕೇತಿಕವಾಗಿ ‘ಶಾಲಾ ಆರಂಭೋತ್ಸವ’ ಕಾರ್ಯಕ್ರಮ ಆಯೋಜಿಸಿದ್ದು, ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿಕೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೆ, ನಗರದ ಬಹುತೇಕ ಶಾಲೆಗಳಲ್ಲಿ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಲು ಶಿಕ್ಷಕರು ಹಾಗೂ ಆಡಳಿತ ಮಂಡಳಿ ತೀರ್ಮಾನಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1814494488

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.