ಹುಬ್ಬಳ್ಳಿ: ‘ಜಠರದ ಕ್ಯಾನ್ಸರ್ನಿಂದ ಬಳಲುತ್ತಿದ್ದ 75 ವರ್ಷದ ಮಹಿಳೆಗೆ ಇಲ್ಲಿನ ಎಚ್ಸಿಜಿ ಸುಚಿರಾಯು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಎಂಡೋಸ್ಕೋಪಿಕ್ ಸಬ್ಮ್ಯೂಕೋಸಲ್ ಡಿಸೆಕ್ಷನ್ (ಇಎಸ್ಡಿ) ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ’ ಎಂದು ತಜ್ಞ ವೈದ್ಯ ಸಂದೀಪ್ ಕುಂಬಾರ್ ತಿಳಿಸಿದರು.

ನಗರದಲ್ಲಿನ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಜೀರ್ಣ, ಹೊಟ್ಟೆನೋವು, ಹಸಿವಾಗದೇ ಇರುವುದು, ತೂಕ ಕಡಿಮೆ ಆಗಿದ್ದರಿಂದ ಮಹಿಳೆಗೆ ಆಧುನಿಕ ತಂತ್ರಜ್ಞಾನದ ಮೂಲಕ ಕೂಲಂಕಷ ತಪಾಸಣೆ ನಡೆಸಲಾಯಿತು. ಆಗ, ಕ್ಯಾನ್ಸರ್ ಆರಂಭಿಕ ಹಂತದಲ್ಲಿ ಇರುವುದು ಪತ್ತೆಯಾಯಿತು’ ಎಂದರು.

‘ಒಂದು ಗಂಟೆ ಇಎಸ್ಡಿ ಮೂಲಕ ಚಿಕಿತ್ಸೆ ನೀಡಿದ್ದರಿಂದ ಮಹಿಳೆ ವೇಗವಾಗಿ ಚೇತರಿಸಿಕೊಂಡರು. ಎರಡು ದಿನದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಅತಿಯಾದ ಧೂಮಪಾನ, ಮದ್ಯಸೇವನೆ, ಅಸುರಕ್ಷಿತ ಆಹಾರ ಕ್ರಮ ಹಾಗೂ ವಂಶವಾಹಿ ಮೂಲಕ ಇಂತಹ ಸಮಸ್ಯೆ ಕಾಣಿಸಿಕೊಳ್ಳಬಹುದು’ ಎಂದು ಹೇಳಿದರು.

ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಮತ್ತು ಹೆಪಟಾಲಜಿಸ್ಟ್ ಸಂಜೀವ್ ಚಟ್ನಿ, ಮುಖ್ಯ ಕಾರ್ಯಾಚರಣಾಧಿಕಾರಿ ಮಂಜುನಾಥ ಎಚ್.ಡಿ. ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-866914712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.