ಹುಬ್ಬಳ್ಳಿ: ‘ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಬಾರದು. ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಅದನ್ನು ತಲುಪಲು ಶ್ರಮಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಉಮೇಶ್ ಬೊಮ್ಮಕ್ಕನವರ ಸಲಹೆ ನೀಡಿದರು.

ನಗರದಲ್ಲಿ ಈಚೆಗೆ ನಡೆದ ಎನ್ಎಲ್ಇ ಸಂಸ್ಥೆಯ ಡಾ.ಆರ್.ಬಿ. ಪಾಟೀಲ ಮಹೇಶ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎನ್ಎಲ್ಇ ಸಂಸ್ಥೆಯ ಗೌರವ ಕಾರ್ಯದರ್ಶಿ ಆರ್.ಎನ್. ದೇಸಾಯಿ ಮಾತನಾಡಿ, ‘ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತರಬೇಕು’ ಎಂದರು.

ದ್ವಿತೀಯ ಪಿಯುಸಿ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ 65 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಶೈಕ್ಷಣಿಕ ಸಲಹೆಗಾರ ರಿಯಾಜ್ ಬಸರಿ, ಉಪ ಪ್ರಾಚಾರ್ಯ ರಮೇಶ ಹೊಂಬಾಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-1044523971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.