ಹುಬ್ಬಳ್ಳಿ: ‘ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಒತ್ತು ನೀಡಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಅಮೆರಿಕದ ಬೋಸ್ಟನ್ನ ಐಸೆಲ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸ್ಥಾಪಕ ಪ್ರಸಾದ್ ಪಾಟೀಲ್ ಹೇಳಿದರು.

ಇಲ್ಲಿನ ಕೆ.ಎಲ್.ಇ ಸೊಸೈಟಿಯ ಪಿ.ಸಿ.ಜಾಬಿನ್ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಾರ್ಷಿಕೋತ್ಸವ, ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತಂತ್ರಜ್ಞಾನದಿಂದ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ದುಕೊಂಡು ಅದರಲ್ಲಿ ಪರಿಣತಿ ಸಾಧಿಸಬೇಕು’ ಎಂದರು.

ಮುಖ್ಯ ಅತಿಥಿಯಾಗಿದ್ದ ಜಾನಪದ ತಜ್ಞ ರಾಮು ಮೂಲಗಿ, ‘ಜನಪದ ಸಾಹಿತ್ಯವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ. ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂಧ್ಯಾ ಆರ್.ಕುಲಕರ್ಣಿ ಸ್ವಾಗತಿಸಿದರು. ಕಾಲೇಜು ವೇದಿಕೆಯ ಉಪಾಧ್ಯಕ್ಷೆ ಸುಧಾ ಪಾಟೀಲ ಅವರು ಕಾಲೇಜು ವೇದಿಕೆಯ ವಾರ್ಷಿಕ ವರದಿ ಮಂಡಿಸಿದರು.

ಕಾಲೇಜಿನ ಜಿಮ್ಖಾನಾದ ಉಪಾಧ್ಯಕ್ಷ ಪ್ರಭಾಕರ್ ಟಿ., ಅವರು ಕ್ರೀಡೆ ಮತ್ತು ಎನ್ಸಿಸಿ ಚಟುವಟಿಕೆಗಳ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಪೇಟೆಂಟ್ ಹೊಂದಿರುವವರು, ವಿಜ್ಞಾನಿಗಳು, ಅಂತರರಾಷ್ಟ್ರೀಯ ಸಂದರ್ಶಕ ಅಧ್ಯಾಪಕರು, ಪಿಎಚ್.ಡಿಪುರಸ್ಕೃತರನ್ನು ಸನ್ಮಾನಿಸಲಾಯಿತು. ಗಣ್ಯರು ಕಾಲೇಜಿನ ಸುದ್ದಿ ಪತ್ರವನ್ನು ಬಿಡುಗಡೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-24-1173327485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.