ಹುಬ್ಬಳ್ಳಿ: ‘ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಬೆಂಗಳೂರಿನ ಸಿಇಎನ್ಎಸ್ ಸಂಶೋಧನಾ ಸಂಸ್ಥೆಯ ಪ್ರೊ.ಸಿ.ವಿ.ಏಳಮಗ್ಗದ ಹೇಳಿದರು.

ನಗರದ ಉಣಕಲ್ಲಿನ ಶ್ರೀನಗರದ ಎಸ್.ಕೆ.ಟಿ ಸಾರಥಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾವು ಸೇವಿಸುವ ಆಹಾರ, ನೀರು, ಗಾಳಿ ಕಲುಷಿತವಾಗಿದೆ. ಇದರಿಂದಾಗಿ ಜನರು ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಂಶೋಧನೆ ನಡೆಸಿ ಇವುಗಳಿಗೆ ಉತ್ತಮ ಔಷಧ ಕಂಡು ಹಿಡಿಯಬೇಕು’ ಎಂದರು.

ಡಾ.ಆನಂದ ಪಾಂಡುರಂಗಿ ಮಾತನಾಡಿ, ‘ಪೋಷಕರು ತಮ್ಮ ಕನಸನ್ನು ಮಕ್ಕಳ ಮೇಲೆ ಹೇರಬಾರದು. ಅವರ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.

ಹೈದರಾಬಾದ್ನ ವಿಜ್ಞಾನಿ ಮಂಜುನಾಥ, ಹು-ಧಾ ಮಹಾನಗರ ಪಾಲಿಕೆ ಸದಸ್ಯರ ರಾಜಣ್ಣ ಕೊರವಿ, ಪ್ರೊ. ಪಿ.ಎಸ್.ಹೆಗಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ 300 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಲ್.ಪಿ.ಹೆಗಡಿ, ಶ್ರೀನಗರ ಸೊಸೈಟಿಯ ಅಧ್ಯಕ್ಷರ ಡಿ. ಎನ್. ಮುತಾಲಿಕ, ಆರ್.ಎಸ್. ರಾಜನಾಳ ಇದ್ದರು.

ಪ್ರಾಚಾರ್ಯರಾದ ಆರ್.ವಿ.ಜಹಗಿರದಾರ ಸ್ವಾಗತಿಸಿ, ಉಪನ್ಯಾಸಕಿ ಸಹನಾ ನಂದಿ ವಂದಿಸಿದರು. ಅಮೃತಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-2077750671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.