ಹುಬ್ಬಳ್ಳಿ: ‘ಶಿಕ್ಷಣ ಪಡೆಯುವುದು, ಸಾಹಿತಿಯಾಗುವುದು ದೊಡ್ಡ ವಿಷಯವಲ್ಲ. ಸಮಾಜಮುಖಿ ಚಿಂತನೆ ಹಾಗೂ ಉದಾತ್ತ ಮನೋಭಾವ ಹೊಂದುವುದು ಮುಖ್ಯ’ ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣ ತೋಂಟದಾರ್ಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ಕುಟುಂಬದವರು ಸಹಯೋಗದಲ್ಲಿ ನಡೆದ ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರ ‘ವಚನ ಸುಧೆ’, ‘ತುಪ್ಪದ ತಲೆಯವರು’ ಹಾಗೂ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರೊ.ಎಸ್.ವಿ.ಪಟ್ಟಣಶೆಟ್ಟಿ ಅವರು, ತಮ್ಮ ಸಾಹಿತ್ಯ ಕೃತಿಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹಾಗೂ ಚಿಂತನೆಗಳನ್ನು ಹಂಚಿಕೊಂಡಿದ್ದಾರೆ. ಸಮುದಾಯದ ಒಳಿತಾಗಿ ಯೋಚಿಸುವ ವ್ಯಕ್ತಿಯಾಗಿದ್ದಾರೆ’ ಎಂದು ಬಣ್ಣಿಸಿದರು.

ಲೆಕ್ಕಪರಿಶೋಧಕ ಸಿ.ಎ.ನಟರಾಜ ಮೂರಶಿಳ್ಳಿ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣನವರ ಮತ್ತು ವೀರಣ್ಣ ರಾಜೂರ ಅವರು ಕೃತಿಗಳ ಕುರಿತು ಮಾತನಾಡಿದರು.

ಪ್ರೊ.ಶೋಭಾ ಜಾಬಿನ ಹಾಗೂ ತಂಡದವರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ಪತ್ರಕರ್ತ ಗಿರೀಶ ಪಟ್ಟಣಶೆಟ್ಟಿ, ಜೆ.ಎಸ್.ಪ್ರಸನ್ನಕುಮಾರ್ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಪ್ರಭುಶಂಕರ,ಪ್ರೊ.ಐ.ಜಿ.ಸನದಿ, ಎಂ.ವಿ.ಗೊಂಗಡಶೆಟ್ಟಿ, ಮೈತ್ರೇಯಿಣಿ ಗದಿಗೆಪ್ಪಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-613899556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.