ಹುಕ್ಕೇರಿ: ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಸಮಾಜ ಸೇವೆಯ ಆಕಾಂಕ್ಷೆ ಹೊಂದಿದ್ದರೆ ಪ್ರಶಸ್ತಿಗಳು ತಾವೇ ಹುಡುಕಿಕೊಂಡು ಬರುತ್ತವೆ ಎಂದು ಸಮಾಜ ಸೇವಕಿ ಸೀತವ್ವ ಜೋಡಟ್ಟಿ ಹೇಳಿದರು.

ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವನಾಥ ಕತ್ತಿ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎ., ಬಿ.ಕಾಂ. ಮತ್ತು ಬಿ.ಎಸ್.ಸಿ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಎಸ್. ಹೂಗಾರ ಮಾತನಾಡಿ, ‘ವಿದ್ಯಾರ್ಥಿಗಳು ಸಿಕ್ಕ ಅವಕಾಶ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.

ಜಿ.ಎಸ್.ನಾಯಕ, ಆಡಳಿತಾಧಿಕಾರಿ ಕೆ.ಸಿ.ಮುಚಖಂಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಭಂಗಿ, ಐಟಿಐ ಕಾಲೇಜಿನ ಪ್ರಾಚಾರ್ಯ ವಿ.ಡಿ.ತೋರೋ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಎಸ್.ಡಿ.ಬೆಳ್ಳಿಕಟ್ಟಿ, ಯು.ಕೆ. ಪಾಟೀಲ, ಆರ್.ಎಸ್. ಹುದ್ದಾರ್, ಆರ್.ಕೆ. ಪಾಟೀಲ, ಬಿ.ಎ.ಮಿರ್ಜೆ, ಜಿ.ಎಸ್.ನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-21-2102122510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.