ಹುಕ್ಕೇರಿ: ಪಾಶ್ಚಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ಏ.9 ರಿಂದ 15 ರವರೆಗೆ ತಾಲ್ಲೂಕಿನ ರುಸ್ತುಂಪುರ ಗ್ರಾಮದಲ್ಲಿ ಜರುಗಲಿದೆ.

ಶಿಬಿರದ ಅವಧಿಯಲ್ಲಿ ಸ್ವಚ್ಛತಾ ಅಭಿಯಾನ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಮತದಾನ ಜಾಗೃತಿ, ಗ್ರಾಮ ಸ್ವಚ್ಛತೆ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಚಟುವಟಿಕೆ ನಡೆಯುವವು. ಶಿಬಿರದ ಉದ್ಘಾಟನಾ ಸಮಾರಂಭ ಏ.9 ರಂದು ಬೆಳಿಗ್ಗೆ 10 ಗಂಟೆಗೆ ರುಸ್ತುಂಪುರ ಗ್ರಾಮದ ಕಮಲಾದೇವಿ ದೇವಸ್ಥಾನದಲ್ಲಿ ನಡೆಯಲಿದೆ. ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಮತ್ತು ಗ್ರಾಮಸ್ಥರು ಭಾಗವಹಿಸಲಿದ್ದಾರೆ.

ಈ ಶಿಬಿರದದಲ್ಲಿ ಸ್ವಯಂ ಸೇವಕರಿಗೆ ಸಾಮಾಜಿಕ ಜವಾಬ್ದಾರಿ, ಸೇವಾಭಾವ ಮತ್ತು ಗ್ರಾಮೀಣ ಅಭಿವೃದ್ಧಿಯ ಕುರಿತು ಅರಿವು ಮೂಡಿಸುವ ಮುಖ್ಯ ಉದ್ದೇಶವಿದೆ ಎಂದು ಎನ್.ಎಸ್.ಎಸ್. ಘಟಕದ ಅಧ್ಯಕ್ಷರೂ ಆದ ಪ್ರಾಚಾರ್ಯ ಶ್ರೀಧರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-21-1954762031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.