ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನ ಸರ್ ಎಂ. ವಿಶ್ವೇಶ್ವರಯ್ಯ ಪ್ರೌಢಶಾಲೆಯಲ್ಲಿ ಸೋಮವಾರ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಜರುಗಿತು.

ಹೊಸಪೇಟ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನೀಲಕಂಠ ಕುಲಕರ್ಣಿ ಮತ್ತು ಮುಖ್ಯ ಶಿಕ್ಷಕ, ಶಿಕ್ಷಕರು, ಶಿಕ್ಷಕಿಯರು ವಿದ್ಯಾರ್ಥಿಗಳ ಮೇಲೆ ಪುಷ್ಪ ಹಾಕುವುದರ ಮೂಲಕ ಸ್ವಾಗತಿಸಿದರು. ಪಿಡಿಒ ನೀಲಕಂಠ ಕುಲಕರ್ಣಿ ಅವರು ಸರಸ್ವತಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ಮೊಬೈಲ್ ಬಿಡಿ, ಪುಸ್ತಕ ಹಿಡಿ ಎಂದು ಹೇಳಿದರು.

ಮುಖ್ಯಶಿಕ್ಷಕ ಬಿ.ಎಸ್.ನಾಗನೂರಿ, ಉತ್ತಮ ಕಲಿಕೆಉಜ್ವಲ ಭವಿಷ್ಯದ ಕುರಿತು ಮಕ್ಕಳಿಗೆ ತಿಳಿ ಹೇಳಿದರು. ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಮಕ್ಕಳಿಗೆಕ್ಷೀರಭಾಗ್ಯ ಯೋಜನೆ, ಪೌಷ್ಠಿಕ ಆಹಾರ, ಸಿಹಿಊಟವನ್ನು ವಿತರಿಸಲಾಯಿತು. ಶಿಕ್ಷಕರು, ಸಿಬ್ಬಂದಿ, ಅಡುಗೆ ಸಿಬ್ಬಂದಿ ಇದ್ದರು. ಶಿಕ್ಷಕಿ ಕಸ್ತೂರಿ ಹುರಳಿ ಸ್ವಾಗತಿಸಿ ನಿರೂಪಿಸಿದರು. ಶಿಕ್ಷಕಿ ಎಸ್.ಐ. ಮುಲ್ಲಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-21-520120831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.