ಹುಕ್ಕೇರಿ: ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಮಾನತೆ ಸಮ್ಮಿಲನಗೊಂಡ ರಾಜಕೀಯ ಸ್ವಾತಂತ್ರ್ಯ ಇರಬೇಕೆಂಬುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸದಾಶಯವಾಗಿತ್ತು. ಆದರೆ ಇಂದು ಭಾರತದಲ್ಲಿ ಅದು ಕಂಡು ಬರುತ್ತಿದೆಯೆ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಧಾರವಾಡದ ಡಾ.ಅಂಬೇಡ್ಕರ್ ಸಮುದಾಯ ಪ್ರಗತಿ ಸಂಸ್ಥೆಯ ಪ್ರಧಾನ ಕಾರ್ತದರ್ಶಿ ಹಾಗೂ ನಿವೃತ್ತ ಪ್ರಾಧ್ಯಾಪಕ ಲಕ್ಷ್ಮಣ ಬಕ್ಕಾಯಿ ಅಭಿಮತ ವ್ಯಕ್ತಪಡಿಸಿದರು.

ಅವರು ಪಟ್ಟಣದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ’ಯಲ್ಲಿ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್.ಮಲ್ಲಾಡದ, ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಶಾನೂಲ್ ತಹಸೀಲ್ದಾರ್, ಎಸ್.ಸಿ.ಎಸ್.ಟಿ ಜಾಗೃತ ಸಮಿತಿ ಜಿಲ್ಲಾ ಸದಸ್ಯ ಕರೆಪ್ಪ ಗಡೆನ್ನವರ, ಉಪವಿಭಾಗ ಮಟ್ಟದ ಸದಸ್ಯ ರಮೇಶ್ ಹುಂಜಿ, ಸಿಡಿಪಿಒ ಹೊಳೆಪ್ಪ ಅತಿಥಿಗಳಾಗಿದ್ದರು. ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ನಿಜಲಿಂಗೇಶ್ವರ ಸ್ವಾಮೀಜಿ ‘ಸಂವಿಧಾನದ ಆಶಯಗಳಿಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕಾದುದು ಇಂದಿನ ಅನಿವಾರ್ಯತೆ’ ಎಂದು ಹೇಳಿದರು.

ಪ್ರತಿಜ್ಞಾ ವಿಧಿ: ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಇದೇ ಸಂದರ್ಭದಲ್ಲಿ ಬೋಧಿಸಲಾಯಿತು. ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ಡಿಎಸ್ಎಸ್ ಮುಖಂಡರಾದ ಉದಯ ಹುಕ್ಕೇರಿ, ಪ್ರಕಾಶ ಮೈಲಾಖೆ, ಮಲ್ಲಿಕಾರ್ಜುನ ರಾಶಿಂಗೆ, ಕೆಂಪಣ್ಣ ಶಿರಹಟ್ಟಿ, ಬಾವುಸಾಬ ಪಾಂಡ್ರೆ, ಬಸವರಾಜ ವಾಜಂತ್ರಿ, ಮುತ್ತು ಕಾಂಬಳೆ, ಆನಂದ ಪಾಟೀಲ, ಡಾ.ರಮೇಶ್ ಹೊಸಮನಿ, ಅವಿನಾಶ ಹೊಳೆಪ್ಪಗೋಳ, ಬಸವರಾಜ ತಳವಾರ, ಸುರೇಶ ದಿನ್ನಿಮನಿ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು, ನೂರಾರು ಜನರು ಸೇರಿದ್ದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗುರುಶಾಂತ ಪಾವಟೆ ಸ್ವಾಗತಿಸಿದರು. ಪ್ರಾಚಾರ್ಯ ಸುಭಾಸ ಘಸ್ತಿ ನಿರೂಪಿಸಿದರು. ವಾರ್ಡನ್ ಶಿವಾನಂದ ಶೆಟ್ಟೆನ್ನವರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-1280865428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.