ಹುಳಿಯಾರು: ತಾಂತ್ರಿಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅನಿವಾರ್ಯವಾಗಿದೆ ಎಂದು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಕೆ.ಬಿ.ಸರಸ್ವತಿ ತಿಳಿಸಿದರು.

ಹುಳಿಯಾರು –ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೋಶದ ಕಂಪ್ಯೂಟರ್ ಸಾಕ್ಷರತಾ ವೇದಿಕೆಯಿಂದ ನಡೆದ ‘ಉಚಿತ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆಶುಕ್ರವಾರ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಎಸ್.ಸಿ.ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳಲ್ಲಿಕೇವಲ ಪಠ್ಯದ ಜ್ಞಾನವಷ್ಟೇ ಅಲ್ಲದೆ, ಪ್ರಾಯೋಗಿಕ ಕಂಪ್ಯೂಟರ್ ಕೌಶಲಗಳನ್ನು ಬೆಳೆಸುವುದು ಕಾಲೇಜಿನ ಮುಖ್ಯ ಉದ್ದೇಶ. ಕಾಲೇಜು ಸತತವಾಗಿ ಇಂತಹ ಉಪಯುಕ್ತ ತರಬೇತಿಗಳನ್ನು ನೀಡುತ್ತಾ ಬಂದಿದೆ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕ ಬಿ. ಯೋಗೀಶ್, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕೌಶಲಗಳ ಅಭಿವೃದ್ಧಿ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು.

ಉಪನ್ಯಾಸಕರಾದ ಸುಷ್ಮಾ ಎಲ್. ಬಿರಾದಾರ್, ಧನಂಜಯ್, ಉದ್ಯೋಗ ಮತ್ತು ತರಬೇತಿ ಕೋಶದ ಸಂಯೋಜಕಿ ಎಸ್.ಲಕ್ಷ್ಮಿ , ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-17-1516777767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.