ಹುಳಿಯಾರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೇಕಾದ ಸೌಲಭ್ಯಗಳಿದ್ದು ಪೋಷಕರು ಬಳಸಿಕೊಳ್ಳಬೇಕು ಎಂದು ಹೊಯ್ಸಳಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಆರ್.ಪರಶಿವಮೂರ್ತಿ ಹೇಳಿದರು.

ಶಾಲೆಯಲ್ಲಿ ಶನಿವಾರ ನಡೆದ ಮಕ್ಕಳ ಮನೆ ಪೋಷಕರ ಸಭೆಯಲ್ಲಿ ಮಾತನಾಡಿ, ಮಕ್ಕಳಲ್ಲಿ ಸರ್ವಾಂಗೀಣ ಬೆಳವಣಿಗೆಯಾಗಬೇಕಾದರೆ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಬೇಕು ಎಂದರು.

ಸುವರ್ಣ ವಿದ್ಯಾ ಚೇತನ ಸಂಘಟನೆಯ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಶಿಕ್ಷಣ ಜ್ಞಾನ ಸಂಪಾದನೆ ಮಾತ್ರವಲ್ಲ. ಮಕ್ಕಳಲ್ಲಿ ಉತ್ತಮ ಮೌಲ್ಯಗಳು ಬೆಳೆಯಬೇಕು. ಮಾನವ ಸಂಬಂಧಗಳು ಸಾಮರಸ್ಯವಾಗಿರಬೇಕು. ದೇಶದ ಪ್ರಜ್ಞಾವಂತ ನಾಗರಿಕರಾಗುವ ಗುಣ ಅಂಕುರಿಸಬೇಕು. ಇದು ಸಾಧ್ಯವಾಗುವುದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಕಲಿತರೆ ಮಾತ್ರ ಎಂದು ವಿಶ್ಲೇಷಿಸಿದರು.

ಸುವರ್ಣ ವಿದ್ಯಾ ಚೇತನದ ಕಾರ್ಯದರ್ಶಿ ಎಚ್.ಆರ್ ಯುವರಾಜ್, ಎಚ್.ಆರ್ ಶಿವಕುಮಾರ್, ಹೇಮಲತಾ, ಧನಲಕ್ಷ್ಮಿ, ಪೋಷಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-17-281576916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.