ಹುಲಸೂರ: ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಹುಲಸೂರ ಸಮೀಪದ ಹಲಸಿ ತುಗಾಂವ ಗ್ರಾಮದಲ್ಲಿ ಪಿಎಂಶ್ರೀ ಯೋಜನೆಯಡಿ ₹17.70 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಯುಕೆಜಿ ನೂತನ ಕಟ್ಟಡ, ವರ್ಗ ಕೋಣೆಗಳು, ಸ್ಮಾರ್ಟ್ ಕ್ಲಾಸ್ ಹಾಗೂ ಗ್ರಂಥಾಲಯ ಕಟ್ಟಡವನ್ನು ಸಂಸದ ಸಾಗರ ಈಶ್ವರ ಖಂಡ್ರೆ ಗುರುವಾರ ಉದ್ಘಾಟಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಆಯೋಜಿಸಲಾದ ಮಕ್ಕಳ ಸಂತೆಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಸ್ತುಗಳನ್ನು ಗಮನದಿಂದ ಪರಿಶೀಲಿಸಿ ಅವರ ಸೃಜನಶೀಲತೆ, ಕೈಚಳಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳಿಗೆ ಇಂತಹ ಚಟುವಟಿಕೆಗಳು ಕೇವಲ ಶಿಕ್ಷಣದ ಭಾಗವಾಗಿಯೇ ಅಲ್ಲದೆ, ಆತ್ಮವಿಶ್ವಾಸವನ್ನು ಹೆಚ್ಚಿಸಿ ಜೀವನ ಕೌಶಲಗಳನ್ನು ಬೆಳೆಸಲು ಸಹಾಯಕವಾಗುತ್ತವೆ ಎಂದರು.

ಗ್ರಾಮೀಣ ಹಾಗೂ ಗಡಿಭಾಗದ ವಿದ್ಯಾರ್ಥಿಗಳು ಕೂಡ ನಗರ ಪ್ರದೇಶದ ಮಕ್ಕಳಿಗೆ ಸಮಾನವಾಗಿ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಪಡೆಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆಧುನಿಕ ತರಗತಿ ಕೊಠಡಿಗಳು, ಸ್ಮಾರ್ಟ್ ಕ್ಲಾಸ್ ಹಾಗೂ ಗ್ರಂಥಾಲಯಗಳಂತಹ ಸೌಲಭ್ಯಗಳ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟವನ್ನು ಹೆಚ್ಚಿಸಲು ವಿಶೇಷ ಗಮನ ನೀಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು.

ಬಳಿಕ ವಿವಿಧ ಗ್ರಾಮಗಳಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಅಳವಾಯಿ ಗ್ರಾಮದಲ್ಲಿ ₹35 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ವಾಂಝರಖೇಡಾ ಗ್ರಾಮದಲ್ಲಿ ₹70 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾರ್ಯ ಹಾಗೂ ನಾರದ ಸಂಗಮ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ರೈತರ ಹೊಲಗಳಿಗೆ ಸಂಪರ್ಕಿಸುವ ದಾರಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಜಿಪಂ ಸಿಇಒ ಗಿರೀಶ್ ಬದೋಲೆ, ತಾಲ್ಲೂಕು ಪಂಚಾಯಿತಿ ಇಒ ಸೂರ್ಯಕಾಂತ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ, ಎಇಇ ಅಲ್ತಾಫ್ ಮಿಯಾ, ಪಿಡಿಓ ಗಣೇಶ ಮಗರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಪಿಚರುಟೆ, ಪ್ರವೀಣ ಹನುಮಶೆಟ್ಟಿ, ಹಂಸರಾಜ್ ಪಾಟೀಲ, ದಿಲೀಪ್ ಪಾಟೀಲ, ಶರದ ಗಂದಗೆ, ಗಜಾನಂದ ಮೊಳಕೆರೆ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-1664940617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.