ಹುಲಸೂರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಲಸೂರ ತಾಲ್ಲೂಕು ಘಟಕದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಾಜಪ್ಪ ನಂದೋಡೆ, ಹರಿನಾಥ್ ಪಾಟೀಲ ಹಾಗೂ ಪುಷ್ಪ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಘಟಕದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಅಶೋಕ್ ನಿಂಗಾವರೆ ಹಾಗೂ ಸಹಾಯಕ ಚುನಾವಣಾಧಿಕಾರಿ ಮಾಣಿಕಪ್ಪ ಸಂಗನಬಟ್ಟೆ ನಡೆಸಿಕೊಟ್ಟರು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ಆಯ್ಕೆ ಪತ್ರಗಳನ್ನು ವಿತರಿಸಿದರು.

ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ರಾಜಪ್ಪ ನಂದೋಡೆ ಮಾತನಾಡಿ, ಶಿಕ್ಷಕರ ಸಂಘದ ಮೇಲಿಟ್ಟಿರುವ ವಿಶ್ವಾಸಕ್ಕೆ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಘಟನೆಯ ವತಿಯಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಈ ವೇಳೆ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನಾಗರಾಜ ಹಾವಣ್ಣ, ಭೀಮಶಂಕರ್ ಅದೆಪ್ಪ, ಶಾಮರಾಜ ಮಾಶೆಟ್ಟೆ, ಧರ್ಮೇಂದ್ರ ಬೋಸ್ಲೆ, ಡಿ. ಸಿ. ಪಾಟೀಲ, ಸಂತೋಷ್ ಪಾಟೀಲ, ನವನಾಥ ದೇಶಮುಖ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಎಸ್ಸಿ–ಎಸ್ಟಿ ನೌಕರರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-33-1145571716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.