ಹುಮನಾಬಾದ್: ‘ನಾವು ಯಾವುದೇ ಹುದ್ದೆಗೆ ಏರಿದರೂ ನಮಗೆ ವಿದ್ಯಾ ಕಲಿಸಿದ ಗುರುಗಳನ್ನು ಸದಾ ಸ್ಮರಿಸಬೇಕು’ ಎಂದು ಶಾಲೆಯ ಆಡಳಿತಾಧಿಕಾರಿ ಗುಂಡಯ್ಯ ತೀರ್ಥ ಹೇಳಿದರು.

ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಬಸವತೀರ್ಥ ವಿದ್ಯಾಪೀಠ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2000ನೇ ಸಾಲಿನೇ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಸಮಾಜದ ನಿಜವಾದ ನಾಯಕರು. ಗುರು ಮತ್ತು ಸ್ನೇಹಿತನ ಸಂಬಂಧವನ್ನು ಜೀವ ಇರುವವರೆಗೆ ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಶಿಕ್ಷಕ ಸುಂದರರಾಜ ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಕಲಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಿಗಿಂತ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರೂ ಅವರನ್ನು ಮರೆಯದೇ ಸನ್ಮಾನಿಸುತ್ತಿರುವ ನಿಮ್ಮ ಕಾರ್ಯ ಶ್ಲಾಘನೀಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಕ್ಷಕ ಸುಭಾಷ ಗಂಗಾ ಮಾತನಾಡಿ, ಗುರು ಶಿಷ್ಯರ ಸಂಬಂಧ ಬಹಳ ಪವಿತ್ರವಾದದ್ದು. ನಮ್ಮ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡಿರುವುದು ಸಂತಸ ತಂದಿದೆ ಎಂದರು.

ಶಿಕ್ಷಕರಾದ ಮಧುಕರ ದೇಶಪಾಂಡೆ, ಶಿವಶಂಕರ ಬೇಟಗೇರಿ, ವಿದ್ಯಾವತಿ ತೀರ್ಥಾ, ಶೋಭಾವತಿ, ದಿನೇಶ , ವಿಜಯಲಕ್ಷ್ಮೀ, ಅಂಬಿಕಾ, ರಾಜೇಶ್ವರಿ, ಶಿಲ್ಪಾ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-1794832856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.