ಹುನಗುಂದ: ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿತ ಕಂಡಿದೆ. 5 ವರ್ಷಗಳಲ್ಲಿ ಬರೋಬ್ಬರಿ 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಂದ ದೂರವಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದು ಶಿಕ್ಷಣ ಇಲಾಖೆಗೆ ಆತಂಕ ಮೂಡಿಸಿದೆ. ಮಕ್ಕಳನ್ನು ಕರೆ ತರುವ ಶಿಕ್ಷಣ ಇಲಾಖೆ, ಶಿಕ್ಷಕರ ಪ್ರಯತ್ನಗಳಿಗೆ ನಿರೀಕ್ಷಿತ ಫಲ ಸಿಗುತ್ತಿಲ್ಲ.

ಹುನಗುಂದ ಮತ್ತು ಇಳಕಲ್ ತಾಲ್ಲೂಕುಗಳ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರಗೆ 235 ಕನ್ನಡ ಮಾಧ್ಯಮ ಶಾಲೆಗಳಿದ್ದು, ಅವುಗಳಲ್ಲಿ ಆರು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ (ಕಿರಿಯ ಪ್ರಾಥಮಿಕ ಶಾಲೆ ಒಳಗೊಂಡಂತೆ), 16 ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ.

14 ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 25ಕ್ಕಿಂತ ಕಡಿಮೆ ದಾಖಲಾಗಿದೆ. 29 ಶಾಲೆಗಳಲ್ಲಿ 50ಕ್ಕಿಂತ ಕಡಿಮೆ, 59 ಶಾಲೆಗಳಲ್ಲಿ 100ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಹುನಗುಂದ ಮತ್ತು ಇಳಕಲ್ ತಾಲ್ಲೂಕುಗಳಲ್ಲಿ ಒಂದರಿಂದ ಹತ್ತನೇ ತರಗತಿಯವರಗೆ 25 ಉರ್ದು ಶಾಲೆಗಳಿದ್ದು, ಅವುಗಳಲ್ಲಿ ಆರು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ ಇದೆ. 14 ಶಾಲೆಗಳಲ್ಲಿ 25 ಕ್ಕಿಂತ ಕಡಿಮೆ ದಾಖಲಾಗಿವೆ. ಐದು ಶಾಲೆಗಳಲ್ಲಿ 50ಕ್ಕಿಂತ ಕಡಿಮೆ, ಎರಡು ಶಾಲೆಗಳಲ್ಲಿ ಮಾತ್ರ ಸಂಖ್ಯೆ 50ರ ಗಡಿ ದಾಟಿದೆ. ಇನ್ನುಳಿದ ಮೂರು ಶಾಲೆಗಳಲ್ಲಿ ವಿದ್ಯಾರ್ಥಿಗಳ 100ಕ್ಕಿಂತ ಹೆಚ್ಚಿದ್ದಾರೆ ಅಷ್ಟಿದ್ದರೂ ಅಲ್ಲೀ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿತಗೊಂಡಿದೆ.

100 ಸ್ಮಾರ್ಟ್ ಕ್ಲಾಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತಗೆ ಬೋಧನೆಯಲ್ಲಿ ಹೊಸತನ ಮತ್ತು ತಾಂತ್ರಿಕತೆ ಪರಿಚಯಿಸುವ ಉದ್ದೇಶದಿಂದ ಅಳವಡಿಸುವ ಉದ್ದೇಶದಿಂದ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ 100ಕ್ಕೂ ಹೆಚ್ಚು ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ.

ಸೌಲಭ್ಯಗಳು: ರಾಜ್ಯ ಸರ್ಕಾರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ವಾರದಲ್ಲಿ ಆರು ದಿನ ರಾಗಿ ಮಾಲ್ಟ್ ಮಿಶ್ರಿತ ಹಾಲು, ಮಧ್ಯಾಹ್ನ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ವಿತರಿಸುತ್ತದೆ. ಶಿಷ್ಯವೇತನ, ಹದಿಹರಿಯದ ಹೆಣ್ಣು ಮಕ್ಕಳಿಗೆ ಶುಚಿ ಪ್ಯಾಡ್ ಸೇರಿದಂತೆ ವಿವಿಧ ಬಗೆಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇಷ್ಟೆಲ್ಲಾ ಸೌಲಭ್ಯಗಳಿದ್ದರೂ ವಿದ್ಯಾರ್ಥಿಗಳು ದೂರ ಸರಿಯುತ್ತಿರುವುದು ಏಕೆ ಎನ್ನುವ ಪ್ರಶ್ನೆ ಎದುರಾಗಿದೆ.

ಹುನಗುಂದ ಮತ್ತು ಇಳಕಲ್ ತಾಲ್ಲೂಕಿನಲ್ಲಿ 40 ಶತಮಾನ ಪೂರೈಸಿದ ಶಾಲೆಗಳಿದ್ದು, ಅವುಗಳಲ್ಲಿಯೂ ಸಹ ವಿದ್ಯಾರ್ಥಿಗಳ ಸಂಖ್ಯೆ ಕುಸಿತಗೊಂಡಿದೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ಬೋಧನೆ ಜೊತಗೆ ಅನ್ಯ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ. ಪಠ್ಯ ಬೋಧನೆ ಮುಕ್ತಾಯಗೊಳಿಸಲು ಹಾಗೂ ಇನ್ನಿತರ ಚಟುವಟಿಕೆಗಳನ್ನು ಕೈಗೊಳ್ಳಲು ಕಷ್ಟವಾಗುತ್ತಿದ್ದು, ಇದು ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುತ್ತಿದೆ. ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ ಎಂಬುವುದು ಸರ್ಕಾರಿ ಶಾಲಾ ಶಿಕ್ಷಕರ ಅಳಲು. ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಸರಿಯಾಗಿ ಆಗದ್ದರಿಂದ ಮಕ್ಕಳು ಶಾಲೆಗಳಿಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಾರೆ.

ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಿದೆ. ಹುನಗುಂದ ಮತ್ತು ಇಳಕಲ್ ತಾಲ್ಲೂಕಿಗೆ 44 ಶಾಲೆಗಳು ಮಂಜೂರಾಗಿವೆ. ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮವನ್ನೂ ಆರಂಭಿಸಲಾಗಿದೆ ಎಂದು ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-19-635695920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.