ಹುಣಸಗಿ: ‘ಅಂಗವಿಕಲರ ಸಬಲೀಕರಣಕ್ಕಾಗಿ ಆರೋಗ್ಯ, ಶಿಕ್ಷಣ, ಪುನರ್ವಸತಿ ಹಾಗೂ ಸ್ವಾವಲಂಬನೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಎಪಿಡಿ ಸಂಸ್ಥೆಯ ಮೂಲಕ ದೊರಕಿಸಿ ಕೊಡಲಾಗುತ್ತದೆ’ ಎಂದು ಎಪಿಡಿ ಸಂಸ್ಥೆಯ ತಾಲ್ಲೂಕು ಸಂಯೋಜಕ ಚನ್ನವೀರ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯ ವತಿಯಿಂದ 39 ಜನ ಅಂಗವಿಕಲರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ಅಗತ್ಯ ನೆರವು, ಮಾರ್ಗದರ್ಶನ ನೀಡಲಾಗುತ್ತಿದೆ. ಸಾರ್ವಜನಿಕರು ಇಂತಹ ಅವಕಾಶಗಳನ್ನು ಸದುಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು’ ಎಂದರು.

ಈ ಸಂದರ್ಭದಲ್ಲಿ ಎಪಿಡಿ ಸಂಸ್ಥೆಯ ಬೆಂಗಳೂರಿನ ಎಎಟಿ ಟೀಮ್ನ ಜಾನ ಸ್ಮೀತಾ, ಹುಲೆಪ್ಪ, ಫಿಸಿಯೋಥೆರಪಿಸ್ಟ್ ಯೋಗೇಶ್, ಸಮುದಾಯ ಸಂಯೋಜಕರಾದ ಮಾಲತೇಶ್, ನಾಗರಾಜ, ಲಾಳೆಮಶಾಕ್, ರಮೇಶ್, ಹಾಜಿರಾ, ಸಮುದಾಯ ಕಾರ್ಯಕರ್ತರಾದ ರೇಣುಕಾ ಬಿರಾದಾರ, ಹನುಮಂತ್ರಾಯ ಸೇರಿದಂತೆ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-30-906293249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.