ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ತಾಲ್ಲೂಕಿನ ನವಲಿ ಗ್ರಾಮದಲ್ಲಿ ರುದ್ರಾಂಬ ಎಂ.ಪಿ. ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಸೇವಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಜೀವನ ಪರಿಪೂರ್ಣವಾಗಬೇಕಾದರೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದು ಅವಶ್ಯ. ಸಂಪ್ರದಾಯ, ಪರಂಪರೆ, ನೆಲಮೂಲ ಸಂಸ್ಕೃತಿ ಅಳವಡಿಸಿಕೊಂಡು ದೇಶ ಕಟ್ಟುವುದಕ್ಕೆ ಶೈಕ್ಷಣಿಕ ಸೇವಾ ಶಿಬಿರಗಳು ಸಹಕಾರಿಯಾಗಿವೆ’ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಎಂ. ವಿಜಯಕುಮಾರ್ ಹೇಮಪ್ಪ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾಧಿಕಾರಿಗಳಾದ ಸುರೇಶ್ ಬೂದನೂರು, ಉಮಾದೇವಿ, ಭಾಗ್ಯ ಮಠಪತಿ, ಪ್ರಾಧ್ಯಾಪಕರಾದ ಸತೀಶ್ ಪಾಟೀಲ, ವೆಂಕಟೇಶ್, ಭೀಮಪ್ಪ, ಮುಖಂಡರಾದ ಹಣ್ಣಿ ಶಶಿಧರ, ಕೃಷ್ಣನಾಯ್ಕ, ಮಂಜುನಾಥ, ಎಂ. ಜಗದೀಶ, ಗುಡದಯ್ಯ, ಲಕ್ಷ್ಮಣ, ಪ್ರಶಾಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-486763445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.