ಹೂವಿನಹಡಗಲಿ: ‘ಮೊಬೈಲ್, ಜಾಲತಾಣಗಳಲ್ಲಿ ಕಳೆದು ಹೋಗಿರುವ ಯುವ ಸಮುದಾಯವನ್ನು ಸಾಹಿತ್ಯ ಓದಿನ ಕಡೆ ಆಕರ್ಷಿಸಬೇಕು’ ಎಂದು ಚಂದ್ರಕಾಂತ ಎಸ್.ಪಾಟೀಲ್ ಹೇಳಿದರು.

ಪಟ್ಟಣದ ಗವಿಮಠದಲ್ಲಿ ಭಾನುವಾರ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಯುವ ಘಟಕ ಸಹಯೋಗದಲ್ಲಿ ಆಯೋಜಿಸಿದ್ದ ಕಾಯಕ ದೀಕ್ಷೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಬಸವಾದಿ ಶರಣರ ವಚನಗಳು, ಸೂಫಿ ಸಂತರ ವಿಚಾರಗಳನ್ನು ಗ್ರಂಥಗಳ ರೂಪದಲ್ಲಿ ಪ್ರಕಟಿಸಿ ಓದುಗರಿಗೆ ಒದಗಿಸುವ ಕೆಲಸ ಆಗಬೇಕಾಗಿದೆ’ ಎಂದು ತಿಳಿಸಿದರು.

ಹೊಸಪೇಟೆಯ ಕವಯತ್ರಿ ಭಾರತಿ ಮೂಲಿಮನಿ ಉಪನ್ಯಾಸ ನೀಡಿದರು. ಗವಿಮಠದ ಹಿರಿಶಾಂತವೀರ ಶ್ರೀ, ಮಲ್ಲನಕೆರೆ ಮಠದ ಅಭಿನವ ಚನ್ನಬಸವ ಶ್ರೀ, ಮಂಜುನಾಥ ಹಾಲಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ರವೀಂದ್ರನಾಥ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಸಾಪ ಜಿಲ್ಲಾ ಕಾರ್ಯದರ್ಶಿ ಎನ್.ಎಂ.ರವಿಕುಮಾರ್, ಸಾಹಿತಿ ತೋ.ಮ.ಶಂಕ್ರಯ್ಯ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್.ಜಿ.ಪಾಟೀಲ, ಶಿಕ್ಷಕ ಎಸ್.ದ್ವಾರಕೀಶ್ ರೆಡ್ಡಿ ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಂ.ನಾಗಭೂಷಣ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶೈಲಜಾ ಪವಾಡಶೆಟ್ರು, ಯುವ ಘಟಕದ ಅಧ್ಯಕ್ಷ ಎಂ. ದಯಾನಂದ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮುದೇನೂರು ಉಮಾಮಹೇಶ್ವರ ಮನೆಗೊಂದು ಗ್ರಂಥಾಲಯ ಅನುಷ್ಠಾನದ ಅಂಗವಾಗಿ 9 ಜನರಿಗೆ ಅಭಿನಂದನಾ ಪತ್ರ ವಿತರಿಸಿದರು. ಯುವರಾಜ ಗೌಡ್ರು, ಜಯಮಾಲ, ಎ.ವೀಣಾ, ಮೇಘನಾ, ಯಶಸ್ವಿನಿ, ಸಿಂಚನಾ, ಬಸವರಾಜ ಭಂಡಾರಿ ವಚನ ಗಾಯನ ಪ್ರಸ್ತುತ ಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-25-541178022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.