ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IBPS | ಪ್ರವೇಶ ಪತ್ರ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ..

Last Updated 23 ನವೆಂಬರ್ 2021, 6:53 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರಲ್ಲಿ ಬ್ಯಾಂಕ್‌ಗಳ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ.

ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

2021ನೇ ಸಾಲಿನ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆ ಇದಾಗಿದ್ದು, ಐಬಿಪಿಎಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ವೇಳಾಪಟ್ಟಿ...

1) ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ: 12-12-2021

ಈ ಪರೀಕ್ಷೆ ವೇಳಾಪಟ್ಟಿ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕೊರೊನಾ ಪರಿಸ್ಥಿತಿಯ ನಿರ್ಧಾರಗಳಿಗೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಪರೀಕ್ಷೆ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳು ಇರುತ್ತವೆ ಎಂದುಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: www.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT