ಇಳಕಲ್: ‘ತಂಬಾಕು ಸೇವಿಸಿ ಅನಾರೋಗ್ಯಕ್ಕಿಡಾದ ಹಾಗೂ ಸಾವನ್ನಪ್ಪಿದ ಸಾಕಷ್ಟು ಜನರನ್ನು ನೋಡುತ್ತೇವೆ. ಆದರೂ ಪಾಠ ಕಲಿಯದಿರುವುದು ಮೂರ್ಖತನ. ವ್ಯಸನಗಳನ್ನು ತ್ಯಜಿಸಿ ಜಾಣರಾಗಿ, ಆರೋಗ್ಯವಂತರಾಗಿ’ ಎಂದು ವಿಜಯ ಮಹಾಂತೇಶ ಸಂಸ್ಥಾನಮಠದ ಗುರು ಮಹಾಂತ ಶ್ರೀ ಕರೆ ನೀಡಿದರು.

ನಗರದ ಎಸ್.ಎಸ್. ಕಡಪಟ್ಟಿ ಸ್ಮಾರಕ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಹುನಗುಂದದ ಗೌರಮ್ಮ ಚರಂತಿಮಠ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ನಿಮಿತ್ತ ಸೋಮವಾರ ನಡೆದ ಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಹುನಗುಂದದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಹಾಗೂ ಹೃದ್ರೋಗ ತಜ್ಞ ವೈದ್ಯ ಡಾ.ಮಹಾಂತೇಶ ಕಡಪಟ್ಟಿ ಮಾತನಾಡಿ, ‘ನಾವೀಗ ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿದ್ದೇವೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಹಾನಿಯ ಬಗ್ಗೆ ಸಾಕಷ್ಟು ಮಾಹಿತಿ ಇದ್ದರೂ ಕೆಟ್ಟ ಸ್ನೇಹಿತರ ಸಹವಾಸ, ಒತ್ತಡದ ಜೀವನಶೈಲಿ, ಕುತೂಹಲ ಮತ್ತು ತಪ್ಪು ಕಲ್ಪನೆಗಳಿಂದ ಅನೇಕ ಯುವಕರು ವ್ಯಸನಿಗಳಾಗುತ್ತಿದ್ದಾರೆ. ಕ್ಷಣಿಕ ಸಂತೋಷ ನೀಡಬಹುದಾದ ತಂಬಾಕು, ಜೀವನಪೂರ್ತಿ ನೋವು, ಸಾವು ಉಂಟುಮಾಡುತ್ತದೆ’ ಎಂದು ಎಚ್ಚರಿಸಿದರು.

ಸಾನ್ನಿಧ್ಯ ವಹಿಸಿದ್ದ ಶಿರೂರಿನ ಬಸವಲಿಂಗ ಶ್ರೀ ಮಾತನಾಡಿ, ಜೀವನ ಅಮೂಲ್ಯವಾದದ್ದು. ಅದನ್ನು ವ್ಯರ್ಥ ಮಾಡಬಾರದು. ಕನಸು, ಗುರಿ ಈಡೇರಬೇಕಾದರೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳಿರಬೇಕು. ಆರೋಗ್ಯಕರ ಜೀವನವೇ ಯಶಸ್ಸಿನ ಮೊದಲ ಮೆಟ್ಟಿಲು ಎಂದರು.

ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ನಗರದ ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಕಂಠಿ ವೃತ್ತ ಮಾರ್ಗವಾಗಿ ವಿಜಯ ಮಹಾಂತೇಶ ಸಂಸ್ಥಾನಮಠವರೆಗೆ ಭಿತ್ತಿ ಪತ್ರ ಹಿಡಿದು, ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಪಾದಯಾತ್ರೆ ನಡೆಸಿದರು.

ಹುನಗುಂದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಬಸವರಾಜ ಕೆಂಧೂರ, ವೀರಣ್ಣ ಬಳೂಟಗಿ ಅರುಣೋದಯ ದುದ್ಗಿ, ರಾಚಪ್ಪ ರಾಜಮನಿ ಉಪಸ್ಥಿತರಿದ್ದರು. ವಿ.ಎಂ. ಎಸ್.ಆರ್.ವಿ ಪದವಿ ಕಾಲೇಜಿನ ಕ್ರೀಡಾ ನಿರ್ದೇಶಕ ಎಸ್.ಬಿ.ಚಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರಮ್ಮ ಚರಂತಿಮಠ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಸಂಗಮೇಶ ಪಟ್ಟಣಶೆಟ್ಟಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-19-457113993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.