ಮಂಗಳವಾರ, ಸೆಪ್ಟೆಂಬರ್ 28, 2021
20 °C

‘ಇಂಡಿಯನ್ ಆಯಿಲ್‌’ನಿಂದ ಮೇಧಾ ವಿದ್ಯಾರ್ಥಿವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂಡಿಯನ್ ಆಯಿಲ್ ಸಂಸ್ಥೆಯು ‘ಮೇಧಾ ವಿದ್ಯಾರ್ಥಿವೇತನ ಯೋಜನೆ’ಯಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ರಾಜ್ಯದ 75 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಸ್ತಾಂತರಿಸಿದೆ.

75ನೇ ಸ್ವಾತಂತ್ರ್ಯ ದಿನದ ಅಂಗವಾಗಿ 30 ರಾಜ್ಯಗಳಿಂದ ತಲಾ 75 ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಈ ಯೋಜನೆಯಡಿ ಒಟ್ಟು ₹2.25 ಕೋಟಿ ಮೊತ್ತದಲ್ಲಿ 2,259 ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ. 

‘ಪ್ರತಿ ವಿದ್ಯಾರ್ಥಿನಿ ₹10 ಸಾವಿರ ವಿದ್ಯಾರ್ಥಿವೇತನ ಮತ್ತು ಪ್ರಮಾಣಪತ್ರ ಪಡೆಯಲಿದ್ದಾರೆ. ಇದರಿಂದ ಅವರ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಪ್ರತಿ ರಾಜ್ಯದ ಶಿಕ್ಷಣ ಮಂಡಳಿ ಶಿಫಾರಸಿನ ಮೇರೆಗೆ ಅತಿ ಹೆಚ್ಚು ಅಂಕ ಪಡೆದವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ಇಂಡಿಯನ್ ಆಯಿಲ್ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ್ ಮಾಧವ್ ವೈದ್ಯ,‘ಯುವಜನಾಂಗದ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಸಂಸ್ಥೆ ಈ ಯೋಜನೆ ರೂಪಿಸಿದೆ. ವಿದ್ಯಾರ್ಥಿವೇತನದ ಮೂಲಕ ಹೆಣ್ಣುಮಕ್ಕಳು ತಮ್ಮ ಶೈಕ್ಷಣಿಕ ಗುರಿ ಮತ್ತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ. ವಿದ್ಯಾವಂತ ಹೆಣ್ಣುಮಕ್ಕಳು ಸಧೃಡ ಸಮಾಜ ನಿರ್ಮಿಸುತ್ತಾರೆ ಎನ್ನುವುದು ನಮ್ಮ ನಂಬಿಕೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು