ಭಾರತೀಯ ರೈಲ್ವೆ ಇಲಾಖೆಯು CEN ಸಂಖ್ಯೆ 01/2026ರ ಅಡಿಯಲ್ಲಿ ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿಗಳ (RRB) ಮೂಲಕ ಭರ್ತಿ ಮಾಡಲು ಮಂದಾಗಿದೆ. ವೇಳಾಪಟ್ಟಿಯ ಪ್ರಕಾರ, ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯು ಮೇ 15ರಂದು ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 14ರವರೆಗೆ ಇರಲಿದೆ.

RRB, ALP ನೇಮಕಾತಿ 2026, ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು

ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಪ್ರಮಾಣಪತ್ರ ಅಥವಾ ಸಂಬಂಧಿತ ವಿಭಾಗದಲ್ಲಿ ಎಂಜಿನಿಯರಿಂಗ್ ಡಿಪ್ಲೊಮೊ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳಾಗಿದ್ದು, ಗರಿಷ್ಠ ವಯಸ್ಸಿನ ಮಿತಿಯು 2026ರ ಜುಲೈ 1ಕ್ಕೆ 30 ವರ್ಷ ಮೀರಿರಬಾರದು. ಮೀಸಲಾತಿ ವರ್ಗದ ಅಭ್ಯರ್ಥಿಗಳು ಸರ್ಕಾರಿ ಮಾನದಂಡಗಳ ಪ್ರಕಾರ, ವಯೋಮಿತಿ ಸಡಿಲಿಕೆಗೆ ಅರ್ಹರಾಗಿರುತ್ತಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900 ಆರಂಭಿಕ ವೇತನದೊಂದಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಜೊತೆಗೆ ರೈಲ್ವೆ ನಿಯಮಗಳ ಅಡಿಯಲ್ಲಿ ಅನ್ವಯವಾಗುವ ಇತರ ಭತ್ಯೆಗಳನ್ನು ನೀಡಲಾಗುತ್ತದೆ.

ನೇಮಕಾತಿಯಲ್ಲಿ ಭಾಗವಹಿಸುವ ರೈಲ್ವೆ ವಲಯಗಳು

ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಚಂಡೀಗಢ, ಚೆನ್ನೈ, ಗೋರಖ್ಪುರ, ಗುವಾಹಟಿ, ಕೋಲ್ಕತ್ತ, ಮುಂಬೈ, ಪಟ್ನಾ, ಪ್ರಯಾಗ್ರಾಜ್, ರಾಂಚಿ ಮತ್ತು ಸಿಕಂದರಾಬಾದ್ ಸೇರಿದಂತೆ ಹಲವು ರೈಲ್ವೆ ನೇಮಕಾತಿ ಮಂಡಳಿಗಳು ನಿರ್ವಹಿಸಲಿವೆ.

ಆಯ್ಕೆ ಪ್ರಕ್ರಿಯೆ

RRB ALP ನೇಮಕಾತಿ 2026 ರ ಆಯ್ಕೆ ಪ್ರಕ್ರಿಯೆಯು ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)-1

ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)-2

ಕಂಪ್ಯೂಟರ್ ಆಧಾರಿತ ಸಾಮರ್ಥ್ಯ ಪರೀಕ್ಷೆ (CBAT)

ದಾಖಲೆ ಪರಿಶೀಲನೆ

ವೈದ್ಯಕೀಯ ಪರೀಕ್ಷೆ

RRB ALPಗೆ ಅರ್ಜಿ ಸಲ್ಲಿಕೆ ವಿಧಾನ

ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸುವುದು ಉತ್ತಮ

ಆರ್ಆರ್ಬಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

ಸಹಾಯಕ ಲೋಕೋ ಪೈಲಟ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಗತ್ಯವಿರುವ ವಿವರಗಳನ್ನು ನೋಂದಾಯಿಸಿ.

ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ

ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ

ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ

ಅರ್ಜಿ ಸಲ್ಲಿಕೆ ಬಳಿಕ ಫಾರ್ಮ್ ಅನ್ನು ಡೌನ್ಲೋಡ್ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿರಿ.. https://www.rrbapply.gov.in/#/auth/home

ಅಧಿಸೂಚಿ ಓದಲು ಇಲ್ಲಿ ಓದಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.