ಜಗಳೂರು: ದಶಕಗಳಿಂದ ಸಾವಿರಾರು ಜನರ ಭವಿಷ್ಯ ರೂಪಿಸಿರುವ, ಸದ್ಯ ಶಿಥಿಲಾವಸ್ಥೆಗೆ ತಲುಪಿರುವ ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಹೊಸ ರೂಪ ಸಿಗಲಿದೆ. ದಾನಿಯೊಬ್ಬರು ₹1.60 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆ.

ತಾಲ್ಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೂಡ್ಲಿಗಿ ತಾಲ್ಲೂಕಿನ ಹಿರೇಕುಂಬಳಗುಂಟೆ ಗ್ರಾಮದ ಸಾಫ್ಟ್ವೇರ್ ಎಂಜಿನಿಯರ್ ಹರ್ಷ ಕುಂಬಳಗುಂಟೆ ಅವರು 12 ಕೊಠಡಿಗಳನ್ನು ಒಳಗೊಂಡ ಆಧುನಿಕ ಶೈಲಿಯ ಶಾಲಾ ಕಟ್ಟಡ ಸಂಕೀರ್ಣ ನಿರ್ಮಿಸಲು ನೆರವಾಗಿದ್ದಾರೆ. ಡಿಡಿಪಿಐ ಕಚೇರಿ ಜತೆ ಒಪ್ಪಂದ ಮಾಡಿಕೊಂಡಿರುವ ಅವರು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಉದ್ದೇಶಿಸಿದ್ದಾರೆ. ಗುತ್ತಿಗೆದಾರರು ಹಾಗೂ ಎಂಜಿನಿಯರ್ ಜೊತೆ ಚರ್ಚಿಸಿ, ನೀಲನಕ್ಷೆಯನ್ನೂ ತಯಾರಿಸಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 170 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಒಟ್ಟು 10 ಕೊಠಡಿಗಳಿದ್ದು, ಬಹುತೇಕವು ಶಿಥಿಲವಾಗಿದ್ದರಿಂದ 5 ಕೊಠಡಿಗಳನ್ನು ನೆಲಸಮ ಮಾಡಲಾಗಿದೆ. ಹರ್ಷ ಅವರು ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಗ್ರಾಮದ ಜನರಲ್ಲಿ ಹರ್ಷವನ್ನುಂಟು ಮಾಡಿದೆ.

‘ದಾವಣಗೆರೆ ಜಿಲ್ಲೆಯ ಯಾವುದಾದರೊಂದು ಸರ್ಕಾರಿ ಶಾಲೆಗೆ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಹರ್ಷ ಅವರು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಜತೆ ಚರ್ಚಿಸಿದ್ದರು. ಜಿಲ್ಲಾಧಿಕಾರಿ ಸಲಹೆಯಂತೆ ಕಲ್ಲೇದೇವರಪುರ ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಲಾಯಿತು’ ಎಂದು ಡಿಡಿಪಿಐ ಕೊಟ್ರೇಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಗೆ ಮೇ 18ರಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕ ಬಿ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಡಿಡಿಪಿಐ ಕೊಟ್ರೇಶ್ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-43-1588506681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.