ಜಗಳೂರು: ವಿದ್ಯಾರ್ಥಿಗಳು ಹಾಗೂ ಯುವಕರನ್ನು ಮೊಬೈಲ್ ಫೋನ್ ಗೀಳಿನಿಂದ ಪಾರು ಮಾಡಲು ಪುಸ್ತಕಗಳಿಂದ ಮಾತ್ರ ಸಾಧ್ಯ ಎಂದು ಶಾಸಕ ಬಿ.ದೇವೇಂದ್ರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಈಚೆಗೆ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಚೆಗೆ ಓದುಗರ ಸಂಖ್ಯೆ ಕ್ಷೀಣವಾಗುತ್ತಿದ್ದು, ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ಪುಸ್ತಕಗಳನ್ನು ಕೊಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ 1 ಲಕ್ಷ ಕುಟುಂಬಗಳಿಗೆ ಮನೆಗೊಂದು ಗ್ರಂಥಾಲಯ ತೆರೆಯುವ ಗುರಿ ಇದೆ. ಅತ್ಯುತ್ತಮ ನಿರ್ವಹಣೆ ಮಾಡಿದವರಿಗೆ ನಾಲ್ಕು ವಿದ್ವಾಂಸರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು. ಶಾಲಾ, ಕಾಲೇಜು ಹಂತದಲ್ಲಿ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಅಭಿಯಾನ ನಡೆಸಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ವಿವರಿಸಿದರು.

ಅನಕ್ಷರಸ್ಥ ಕುಟುಂಬಗಳು ಹಿಂದೆ ಕೇವಲ ಅನ್ನಕ್ಕಾಗಿ ಜೀತಮಾಡಿದ ದಿನಗಳಿವೆ. ಅಕ್ಷರವು ತಳಸಮುದಾಯಗಳಿಗೆ ಅರಿವು ಹಾಗೂ ಅನ್ನ ನೀಡಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ದಂಡಿನ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ರವಿಚಂದ್ರ, ಡಿಡಿಪಿಐ ಕೊಟ್ರೇಶ್, ಇಒ ಕೆಂಚಪ್ಪ, ಸಿಪಿಐ ಸಿದ್ರಾಮಯ್ಯ, ಜಿಲ್ಲಾ ಗ್ರಂಥಾಲಯ ಅಧಿಕಾರಿ ಯಮನೂರಪ್ಪ, ಸಾಹಿತಿ ಎನ್.ಟಿ. ಎರ್ರಿಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಪಿ.ಪಾಲಯ್ಯ, ಸೊಕ್ಕೆ ನಾಗರಾಜ್, ಬಿಇಒ ಹಾಲಮೂರ್ತಿ, ಷಂಷೀರ್ ಅಹ್ಮದ್, ಸಾಹಿತಿಗಳಾದ ಅನ್ನಪೂರ್ಣ, ಸುಕನ್ಯ, ಸರೋಜ, ಮಂಜುಳಾ, ಡಿಸಿ ಮಲ್ಲಿಕಾರ್ಜುನ್, ಮುಖಂಡರಾದ ನೇರ್ಲಗುಂಟೆ ತಿಪ್ಪೇಸ್ವಾಮಿ, ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಎನ್. ಓಮಣ್ಣ, ಬೈರೇಶ್, ಗೌಸ್ ಅಹಮ್ಮದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1780728932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.