ಜಗಳೂರು: ‘ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಜನಪರ ಕೆಲಸಕ್ಕಾಗಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದಲ್ಲಿ ಸೋಮವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 12 ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ಹಾಗೂ 2026-27ನೇ ಸಾಲಿನ ಶೈಕ್ಷಣಿಕ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು

ತಾಲ್ಲೂಕಿನಲ್ಲಿ ₹ 1.22 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಅಂಗನವಾಡಿ ಕಟ್ಟಡ, ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ‘ಶಕ್ತಿ’ ಯೋಜನೆ ಸದ್ಬಳಕೆಯಾಗಲು ಗ್ರಾಮಕ್ಕೆ ಸರ್ಕಾರಿ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಸಾಫ್ಟ್ವೇರ್ ಕಂಪನಿ ಉದ್ಯೋಗಿ ಹರ್ಷ ಹಿರೇಕುಂಬಳಗುಂಟೆ ಅವರು ಗ್ರಾಮದ ಶಾಲಾ ಕಟ್ಟಡಕ್ಕೆ ದೇಣಿಗೆ ನೀಡಿರುವುದು ಮಾದರಿಯಾಗಿದೆ ಎಂದರು.

‘ಹರ್ಷ ಹಿರೇಕುಂಬಳಗುಂಟೆ ದಂಪತಿಯ ಸ್ವ–ಇಚ್ಛೆಯಿಂದ ಹಾಗೂ ಕಲ್ಲೇದೇವರಪುರದ ಆರಾಧ್ಯ ದೈವ ಕಲ್ಲೇಶ್ವರ ಸ್ವಾಮಿಯ ಅನುಗ್ರಹದಿಂದ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ತಲೆ ಎತ್ತುತ್ತಿರುವುದು ನಮ್ಮ ಸೌಭಾಗ್ಯವಾಗಿದೆ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

‘ನಾನು ಜಗಳೂರಿನ ನಾಲಂದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾಗ ಹರ್ಷ ಕುಂಬಳಗುಂಟೆ ಅವರ ತಂದೆ, ಕವಿ ಹಿ.ಮ.ನಾಗಯ್ಯ ಅವರನ್ನು ಹತ್ತಿರದಿಂದ ಕಂಡಿರುವೆ. ಅವರ ಪುತ್ರ ಹರ್ಷ ಅವರೆಂಬುದು ತಿಳಿದು ನನಗೆ ಹರ್ಷವಾಯಿತು. ಆರ್ಥಿಕ ಶ್ರೀಮಂತಿಕೆಯುಳ್ಳ ಸಮಾಜದಲ್ಲಿ ದಾನ ಮಾಡುವ ಹೃದಯ ವೈಶಾಲ್ಯತೆಯೂ ಮುಖ್ಯವಾಗಿರುತ್ತದೆ ಪರೋಪಕಾರದಿಂದ ಮಾತ್ರ ಜೀವನ ಸಾರ್ಥಕ’ ಎಂದು ಶಾಸಕರು ಅಭಿಪ್ರಾಯಪಟ್ಟರು.

‘ಈ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ . ತಾಂತ್ರಿಕ ದೋಷದಿಂದ ವಿಳಂಬವಾಗಿದೆ. ನನ್ನ ದೂರದ ಸಂಬಂಧಿಯಾಗಿರುವ ಹರ್ಷ ಅವರು ತಾಯಿ ಊರಾದ ತುಮಕೂರಿನ ಕೋರಾದಲ್ಲಿ ಸ್ವಂತ ಖರ್ಚಿನಲ್ಲಿ ಶಾಲೆ ನಿರ್ಮಿಸಿದ್ದಾರೆ. ಪ್ರಸ್ತುತ ಕಲ್ಲೇದೇವರಪುರ ಸರ್ಕಾರಿ ಶಾಲೆಗೆ 12 ಕೊಠಡಿ ನಿರ್ಮಾಣ ಮಾಡುತ್ತಿದ್ದಾರೆ. ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ್ ರಾವ್, ಡಿಡಿಪಿಐ ಕೊಟ್ರೇಶ್, ಮಮತಾ ಹರ್ಷ, ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ಬಿಇಒ ಹಾಲಮೂರ್ತಿ, ಜಿ.ಪಂ. ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಕೆಪಿಸಿಸಿ ಎಸ್.ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಷಂಷೀರ್ ಅಹಮ್ಮದ್, ಮುಖಂಡರಾದ ಕಲ್ಲೇಶ್ ರಾಜ್ ಪಟೇಲ್, ಬಡಯ್ಯ, ತಿಪ್ಪೇಸ್ವಾಮಿ, ಸಣ್ಣಸೂರಯ್ಯ,ಮಹೇಶ್ವರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-1814447767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.