ಜಮಖಂಡಿ: ‘ಅಸಾಧ್ಯವಾದುದು ಯಾವುದೂ ಇಲ್ಲ, ನಿರಂತರ ಅಧ್ಯಯನ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಸತತ ಪರಿಶ್ರಮವೇ ಯಶಸ್ಸಿನ ಮೂಲ’ ಎಂದು ಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಆನಂದ ದೇಶಪಾಂಡೆ ಹೇಳಿದರು.

ಇಲ್ಲಿನ ಬಿಎಲ್ಡಿಇ ಸಂಸ್ಥೆಯ ವಾಣಿಜ್ಯ, ಬಿಎಚ್ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಸತತ ಪ್ರಯತ್ನ, ಸ್ಪಷ್ಟ ಗುರಿ, ಆತ್ಮವಿಶ್ವಾಸ ಮತ್ತು ಛಲದೊಂದಿದೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಕೌಶಲಕ್ಕೆ ಹೆಚ್ಚಿನ ಮಹತ್ವ ನೀಡಿ. ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಕಠಿಣ ಪರಿಶ್ರಮಪಟ್ಟರೆ ಯಶಸ್ಸು ಸಾಧ್ಯ’ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಚ್. ಲಗಳಿ ಅಧ್ಯಕ್ಷತೆ ವಹಿಸಿ, ‘ಹೆಚ್ಚಿನ ದತ್ತಿನಿಧಿಗಳನ್ನೊಳಗೊಂಡ ಕಾಲೇಜು ನಮ್ಮದೆಂದು ಹೇಳಲು ಹೆಮ್ಮೆ ಎನಿಸುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಸಿದ್ಧರಿದ್ದೇವೆ’ ಎಂದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಬಿಎಲ್ಡಿಇ ದರ್ಪಣ’ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ದತ್ತಿಗಳು ನೀಡಿದ ಒಟ್ಟು 56 ದತ್ತಿನಿಧಿಗಳನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.

ಉಪಪ್ರಾಚಾರ್ಯ ಡಿ.ಎಸ್. ನಿಟ್ಟೂರ, ಬಿ.ಎಂ. ನುಚ್ಚಿ, ಎಸ್.ಎಸ್. ಸುವರ್ಣಖಂಡಿ, ಎ.ಬಿ. ಖೋತ, ಎನ್.ಎಸ್. ಕಾಖಂಡಕಿ ಇದ್ದರು. ಪ್ರಾಚಾರ್ಯ ಪಿ.ಡಿ. ಪೋಳ ಮಾತನಾಡಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ರವಿಶಂಕರ ಬಿ.ಎಸ್., ದೈಹಿಕ ಶಿಕ್ಷಣ ನಿದೇರ್ಶಕ ಕೆ.ಎಂ. ಶಿರಹಟ್ಟಿ ವರದಿ ವಾಚನ ಮಾಡಿದರು. ಶ್ರೀನಿವಾಸ ಕಟ್ಟಿಮನಿ, ಎಸ್.ಪಿ. ಗದ್ಯಾಳ ನಿರೂಪಿಸಿದರು. ಮಲ್ಲಿಕಾರ್ಜುನ ಬಿ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-453440729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.