ಜೇವರ್ಗಿ: ‘ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಬರವಣಿಗೆ ಸ್ಥಗಿತಗೊಂಡಿದೆ. ನೀವು ನಿರ್ಲಿಪ್ತರಾಗಬಾರದು, ಉತ್ಸಾಹ ಕಳೆದುಕೊಳ್ಳದೆ ನೂತನ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಕಲಬುರಗಿ ಶರಣಬಸವೇಶ್ವರ ದೇವಸ್ಥಾನ ಆವರಣ ಶಾಲಾ ಕಾಲೇಜುಗಳ ನಿರ್ದೇಶಕಿ ನೀಲಾಂಬಿಕಾ ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಸಮಿತಿಗಳ ಕಾರ್ಯಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಶಾಂತಾ ಅಷ್ಠಿಗೆ ಮಾತನಾಡಿ, ‘ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು, ಸ್ಪಷ್ಟ ಗುರಿಯನ್ನು ಹೊಂದಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು’ ಎಂದರು.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಮಾತನಾಡಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕ ಖಾಜಾವಲಿ ಈಚನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ರೆಡ್ ಕ್ರಾಸ್ ಸಂಯೋಜಕಿ ಡಾ.ಖುತೇಜಾ ನಸ್ರಿನ್, ಗ್ರಂಥಪಾಲಕ ತಿಪ್ಪಣ್ಣ ವಗ್ದಾಳ್, ರೋವರ್ಸ್ ಲೀಡರ್ ರಾಮುಲು, ರೇಂಜರ್ಸ್ ಲೀಡರ್ ಭಾಗ್ಯಶ್ರೀ, ಕ್ರೀಡಾ ನಿರ್ದೇಶಕ ಉತ್ತಮ ಬಾಳುವಾಲೆ, ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಸ್ಪರ್ಧಾಕೂಟದ ಸಂಚಾಲಕ ಭೀಮಣ್ಣ ಬೆಡಕಪಳ್ಳಿ, ಐಕ್ಯೂಎಸಿ ಸಹ ಸಂಚಾಲಕ ರವೀಂದ್ರ ಸೇರಿದಂತೆ ಇತರರಿದ್ದರು.

ವಿದ್ಯಾರ್ಥಿನಿ ತೇಜಶ್ವಿನಿ ಪ್ರಾರ್ಥಿಸಿದರು. ಎನ್ಎಸ್ಎಸ್ ಸಂಚಾಲಕ ಶರಣಪ್ಪ ಗುಂಡಗುರ್ತಿ ಸ್ವಾಗತಿಸಿದರು. ಉದ್ಯೋಗ ಕೋಶದ ಸಂಚಾಲಕಿ ಶಿಲ್ಪಾ ಜೆ. ನಿರೂಪಿದರು. ಎನ್ಎಸ್ಎಸ್ ಸಂಚಾಲಕ ಕುಪೇಂದ್ರ ರಾಠೋಡ ವಂದಿಸಿದರು.

ಸಾಂಸ್ಕೃತಿಕ, ಕ್ರೀಡೆ, ರೆಡ್ ಕ್ರಾಸ್ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಂಥಾಲಯ ವಿಭಾಗದಿಂದ ಅಧ್ಯಾಪಕರಿಗೆ ಮತ್ತು ವಿದ್ಯಾರ್ಥಿಗಳಿಗೆ ‘ಉತ್ತಮ ಗ್ರಂಥಾಲಯ ಬಳಕೆದಾರ’ರೆಂದು ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-31-1463942104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.