ಕೆ.ಆರ್.ಪೇಟೆ: ಜೀವನದಲ್ಲಿ ಗುರಿ ಸಾಧನೆ ಮಾಡಬೇಕೆಂದರೆ ಸೋಲನ್ನೇ ಗೆಲುವಿನ ಸೋಪಾನವಾಗಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಹೇಳಿದರು.

ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದಲ್ಲಿ ಭಾರತವನ್ನು ಕಟ್ಟುವ ನಿರ್ಮಾತೃಗಳಾದ ನೀವು ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರಿ ಪಲಾಯನ ವಾದ ಅನುಸರಿಸದೇ ಸತತ ಪರಿಶ್ರಮ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸೋಲನ್ನೇ ಗೆಲುವಿನ ಮೆಟ್ಟಿಲುಗಳನ್ನಾಗಿಸಿ ಕೊಂಡು ಸಾಧನೆ ಮಾಡಬೇಕು ಎಂದರು.

ವಿದ್ಯಾರ್ಥಿ ಜೀವನದಲ್ಲಿ ನಾನೂ ನಿಮ್ಮಂತೆ ಕಷ್ಟಪಟ್ಟಿದ್ದೇನೆ. ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ನಾನು ಸೋಲಿಗೆ ಹೆದರದೇ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪದವಿ ಶಿಕ್ಷಣ ಪಡೆದು ನಂತರ ಮಹಾ ಪ್ರಬಂಧ ಮಂಡಿಸಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿರುವೆ. ಸೋಲನ್ನು ಸವಾಲಾಗಿ ಸ್ವೀಕರಿಸಿದ್ದರಿಂದಲೇ ಈ ಯಶಸ್ಸು ಸಾಧ್ಯವಾಯಿತು. ಹಾಗಾಗಿ ನೀವು ಗೆಲುವಿಗೆ ಶ್ರಮಪಡುವದನ್ನು ರೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಾಗಪ್ಪ ಯು. ಭಜಂತ್ರಿ ಮಾತನಾಡಿ, ನಿಮ್ಮೆಲ್ಲರ ಸತತ ಪರಿಶ್ರಮದಿಂದಲೇ ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ ನಮ್ಮ ಕಾಲೇಜು ನೂರಕ್ಕೆ ನೂರರಷ್ಟು ಫಲಿತಾಂಶ ಕೊಡುವ ಕಾಲೇಜಾಗಿ ದೆ. ಇದನ್ನು ಪ್ರತಿ ವರ್ಷ ಮುಂದುವರಿಸುವಂತೆ ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-1028435395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.