ಕೆ.ಆರ್.ಪೇಟೆ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಆಚಾರ, ವಿಚಾರಗಳನ್ನು ಅಳವಡಿಸಿಕೊಂಡರೆ ಬದುಕು ಪರಿಪೂರ್ಣವಾಗುತ್ತದೆ’ ಎಂದು ಕೋಡಿಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಚೌಡಸಮುದ್ರ ಗ್ರಾಮದಲ್ಲಿ ಕೆ.ಆರ್.ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಘಟಕ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

‘ಯುವಕರು ತಮ್ಮೊಳಗಿರುವ ಶಕ್ತಿಯ ಬಗ್ಗೆ ಅರಿವು ಮೂಡಿಸಿಕೊಂಡು ಮುನ್ನುಗ್ಗಿದರೆ ಯಶಸ್ಸು ಸಾಧ್ಯ. ಯಶಸ್ಸು ಪರಿಶ್ರಮದ ಮೇಲೆ ನಿಂತಿರುವದರಿಂದ ಪ್ರಯತ್ನ ಇದ್ದರೆ ಫಲವನ್ನು ಪಡೆಯಬಹುದು. ಆದ್ದರಿಂದ ಹಿರಿಯರ ಮತ್ತು ಗುರುಗಳ ಮಾತನ್ನು ಆಲಿಸಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ, ದುಶ್ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನ ನಡೆಸಿ’ ಎಂದು ಸಲಹೆ ನೀಡಿದರು.

ತಂಡೆಕೆರೆಯ ರಂಬಾಪುರಿ ಬಾಳೆಹೊನ್ನೂರು ಖಾಸಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಸಮಾಜ ಸೇವಕ ಆರ್ಟಿಒ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪ್ರಮುಖರಾದ ಸಾಸಲು ಈರಪ್ಪ, ದೇವರಳ್ಳಿ ಮಹೇಂದ್ರ, ಲಕ್ಷ್ಮಿಪುರ ಚಂದ್ರೆಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-981366276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.