ಕಡೂರು: ‘ದಮನಿತ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಜನಸಾಮಾನ್ಯರ ಪಾಲಿನ ದೇವರು’ ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.

ಪಟ್ಟಣದ ಟಿ.ಬಿ.ರಸ್ತೆಯ ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಬಾಬು ಜಗಜೀವನರಾಂ ಮತ್ತು ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನ ರಚನೆಯ ದೊಡ್ಡ ಸವಾಲನ್ನು ಸಮರ್ಪಕವಾಗಿ ನಿರ್ವಹಿಸಿ, ಸಮಾಜಕ್ಕೆ ಮಾರ್ಗದರ್ಶನ ಮಾಡಿದ ಅಂಬೇಡ್ಕರ್ ಅವರಿಂದ ಭಾರತದ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಅವರ ಜನ್ಮೋತ್ಸವ ದಲಿತ ವರ್ಗಕ್ಕೆ ಸೀಮಿತ ಆಗುತ್ತಿರುವುದು ವಿಪರ್ಯಾಸ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಸಿ.ಆರ್. ಪ್ರವೀಣ್, ‘ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವು ಸಮಾಜದ ಪ್ರತಿಯೊಬ್ಬರಿಗೂ ಲಭಿಸದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯು ದುರ್ಬಲವಾದಂತೆ ಎಂದು ಅಂಬೇಡ್ಕರ್ ಭಾವಿಸಿದ್ದರು. ಅವರ ಆಶಯದಂತೆ ಸಮಾನತೆ ನಮ್ಮ ಸಮಾಜದ ಸಂಸ್ಕೃತಿ ಹಾಗೂ ಶಿಕ್ಷಣ ಧ್ಯೇಯವಾಗಬೇಕು’ ಎಂದರು.

ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಹಾಗೂ ಯರದಕೆರೆ ಎಂ.ರಾಜಪ್ಪ ಮಾತನಾಡಿದರು. ಉಪನ್ಯಾಸಕ ಸನಾವುಲ್ಲಾ ವಿಶೇಷ ಉಪನ್ಯಾಸ ನೀಡಿದರು. ದಲಿತ ಸಂಘರ್ಷ ಸಮಿತಿಯ ಟಿ. ಮಂಜಪ್ಪ, ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್, ಪುರಸಭೆ ಮಾಜಿ ಉಪಾಧ್ಯಕ್ಷ ಮೋಹನ್ಕುಮಾರ್, ಶ್ರೀಕಾಂತ್, ಬಿ.ಟಿ. ಗಂಗಾಧರ ನಾಯ್ಕ, ಪ್ರಕಾಶ್ನಾಯ್ಕ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಟಿ. ನಟರಾಜ್, ಬಿಸಿಎಂ ಅಧಿಕಾರಿ ದೇವರಾಜ್, ಲೋಲಾಕ್ಷಿಬಾಯಿ, ವಸಂತಕುಮಾರಿ, ಕಡೂರು ಬಿಇಒ ತಿಮ್ಮಯ್ಯ, ಕಡೂರು-ಬೀರೂರು ಸರ್ಕಲ್ ಇನ್ಸ್ಪೆಕ್ಟರ್, ಹಾಸ್ಟೆಲ್ ವಾರ್ಡನ್ ರಾಜು ಒಡೆಯರ್, ಕೃಷ್ಣಪ್ಪ, ವೈ.ಸಿ.ಸತೀಶ್, ನಾಗಮ್ಮ, ಬಿ.ಟಿ.ಚಂದ್ರಶೇಖರ್, ಗಿರೀಶ್, ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಎಪಿಎಂಸಿ ಆವರಣದಿಂದ ವಿವಿಧ ಕಲಾತಂಡಗಳೊಂದಿಗೆ ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಸಿ, ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-126-1032131253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.