ಕಡೂರು: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಶ್ರಮದಿಂದ ಕೂಡಿದ ಜೀವನಶೈಲಿ ರೂಪಿಸಲು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ’ ಎಂದು ಕಡೂರು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕೆ. ನಟರಾಜ್ ಹೇಳಿದರು.

ತಾಲ್ಲೂಕಿನ ಎಮ್ಮೆದೊಡ್ಡಿ ಬಳಿಯ ಮುಸ್ಲಾಪುರ ಗ್ರಾಮದಲ್ಲಿ ಗುರುವಾರ ಕಡೂರು ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್ಎಸ್ಎಸ್ ಯೋಜನೆಯು ಗ್ರಾಮೀಣ ಪ್ರದೇಶದ ಬದುಕಿನ ಅರಿವು ಮೂಡಿಸುವ ಜತೆಗೆ ಪ್ರಕೃತಿಯೊಂದಿಗೆ ನಾವು ಹೇಗೆ ಸೇರಿ ಬದುಕಬೇಕು ಎನ್ನುವುದನ್ನು ಕಲಿಸುತ್ತದೆ. ಶಿಬಿರ ಆಯೋಜಿಸಿರುವ ಮುಸ್ಲಾಪುರವು ಪರಿಸರದ ನಡುವೆ ತಾಲ್ಲೂಕಿನ ಜೀವನಾಡಿ ಮದಗದಕೆರೆ ತಪ್ಪಲಿನಲ್ಲಿ, ಶಿಬಿರಾರ್ಥಿಗಳು ಉತ್ತಮ ವಾತಾವರಣದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಗ್ರಾಮದ ಅಭಿವೃದ್ಧಿ, ಸ್ವಚ್ಛತೆ ಮತ್ತು ಆರೋಗ್ಯ ಜಾಗೃತಿ ಮೂಡಿಸುವುದು ಜೊತೆಗೆ ಗ್ರಾಮೀಣ ಸೊಗಡನ್ನು ಕಲಿಯಲು ಶಿಬಿರ ಸಹಕಾರಿಯಾಗಲಿ ಎಂದರು.

ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಆರ್. ಪುಷ್ಪಾಭಾರತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ, ಕಾಲೇಜಿನ ಪ್ರಾಧ್ಯಾಪಕರಾದ ಸೋಮಶೇಖರ್, ಹರೀಶ್, ಕುಮಾರ್, ಎಚ್.ಆರ್. ಜ್ಯೋತಿ, ಎನ್ಎಸ್ಎಸ್ ಘಟಕದ ಸಂಯೋಜಕ ಎಂ.ಎ. ಓಂಕಾರಯ್ಯ ಮತ್ತು ಎಚ್.ಎಸ್. ಸವಿತಾ, ಸಮಾಜ ಕಲ್ಯಾಣ ಇಲಾಖೆಯ ರಾಜು ಒಡೆಯರ್ ಹಾಗೂ ಉಲ್ಲಾಸ್ ಎಸ್.ಆರ್, ಸಂಪತ್, ಶರತ್, ಹರ್ಷಿತ್, ಯೋಜನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-126-1084424701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.