ಕಡೂರು: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ವತಿಯಿಂದ 2025-26ನೇ ಸಾಲಿನ 10 ಮತ್ತು 12ನೇ ತರಗತಿಯಲ್ಲಿ ಶೇ 90 ಹಾಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕಾರಣಾಂತರದಿಂದ ಪುರಸ್ಕಾರ ನೀಡಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲು ತೀರ್ಮಾನಿಸಿದ್ದು, ಮೇ 25ರ ಒಳಗೆ www.aivlm.org ಮೂಲಕ ಅರ್ಜಿ ಸಲ್ಲಿಸಬೇಕು ಎಂದರು.

ಸಮಾರಂಭವನ್ನು ನಿಗದಿ ಪಡಿಸಿದ ನಂತರ ಸಮಾಜದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಜತೆಗೆ ಸಮಾಜಕ್ಕಾಗಿ ದುಡಿದವರು ಹಾಗೂ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಮಹಾಸಭಾದ ಕಾರ್ಯದರ್ಶಿ ಬೇಲೇನಹಳ್ಳಿ ಸೋಮಶೇಖರ್, ಕೋಶಾಧ್ಯಕ್ಷ ಎಚ್.ಸಿ.ರೇವಣಸಿದ್ದಪ್ಪ, ವೀರಶೈವ ಮಹಾಸಭಾದ ತಾಲ್ಲೂಕು ಘಟಕ ಅಧ್ಯಕ್ಷ ಎಸ್.ಪಿ.ರೇಣುಕಾರಾಧ್ಯ, ನಿರ್ದೇಶಕ ಜಿ.ಎಂ.ಯತೀಶ್, ಭಾರ್ಗೇಶಪ್ಪ, ಕಲ್ಲೇಶ್, ದಿವಾಕರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-126-1444305216

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.