ಕಾಗವಾಡ: ಸ್ಕಿಜೋಫ್ರೆನಿಯಾ ಎಂಬುದು ಗಂಭೀರ ಮಾನಸಿಕ ಅಸ್ವಸ್ಥತೆಯಾಗಿದ್ದರೂ, ಸರಿಯಾದ ಚಿಕಿತ್ಸೆ, ಕುಟುಂಬದ ಬೆಂಬಲ ಹಾಗೂ ಸಮಾಜದ ಸಹಕಾರ ದೊರೆತರೆ ವಾಸಿಯಾಗುತ್ತದೆ ಎಂದು ಮಹಾರಾಷ್ಟ್ರದ ಮಿರಜ್ನ ನಿರ್ಮಲ ಆಸ್ಪತ್ರೆ, ವ್ಯಸನಮುಕ್ತಿ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳೆ ಹೇಳಿದರು.

ನಿರ್ಮಲ ಆಸ್ಪತ್ರೆಯ ಸಭಾಭವನದಲ್ಲಿ ಮೇ 24 ರಂದು ನಡೆಯಲಿರುವ ‘ವಿಶ್ವ ಸ್ಕಿಜೋಫ್ರೆನಿಯಾ ಜಾಗೃತಿ ದಿನ’ದ ಪೂರ್ವಿಭಾವಿಯಾಗಿ ಗುರುವಾರ ಹಮ್ಮಿಕೊಂಡ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷ ಮೇ 24 ರಂದು ವಿಶ್ವ ಸ್ಕಿಜೋಫ್ರೆನಿಯಾ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು, ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಹಾಗೂ ರೋಗಿಗಳಿಗೆ ಸಮಾಜದಲ್ಲಿ ಗೌರವಯುತ ಸ್ಥಾನ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ವಿಶ್ವದಾದ್ಯಂತ ಸುಮಾರು 2 ಕೋಟಿ 40 ಲಕ್ಷ ಜನರು ಸ್ಕಿಜೋಫ್ರೆನಿಯಾದಿಂದ ಬಳಲುತ್ತಿದ್ದು, ಭಾರತದಲ್ಲಿಯೂ ಸುಮಾರು 35-40 ಲಕ್ಷ ಜನರಲ್ಲಿ ಈ ಅಸ್ವಸ್ಥತೆ ಕಂಡುಬರುತ್ತಿದೆ. ಆದರೆ ಅಂಧಶ್ರದ್ದೆಯಿಂದಾಗಿ ಮತ್ತು ಭಯ, ಸಾಮಾಜಿಕ ಕಳಂಕದ ಕಾರಣದಿಂದಾಗಿ ಅನೇಕರು ಚಿಕಿತ್ಸೆಯಿಂದ ದೂರ ಉಳಿಯುತ್ತಿದ್ದಾರೆಂದು ವಿಷಾದ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-1271628582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.