ಕೈವಾರ(ಚಿಂತಾಮಣಿ): ತಾಲ್ಲೂಕಿನ ಕೈವಾರ ಹೋಬಳಿಯ ಸರ್ಕಾರಿ ಶಾಲಾ ಮಕ್ಕಳಿಗಾಗಿ ಕೈವಾರ ಕೆಪಿಎಸ್ ಶಾಲೆಯಲ್ಲಿ ಆಯೋಜಿಸಿರುವ ಬೇಸಿಗೆ ಶಿಬಿರ ಗುರುವಾರ ಆರಂಭವಾಯಿತು.

ಮಸ್ತೇನಹಳ್ಳಿ ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಅರುಣ ಪಲ್ಲವಿ ಶಿಬಿರ ಉದ್ಘಾಟಿಸಿ ಮಾತನಾಡಿ, ಬೇಸಿಗೆ ಶಿಬಿರ ಮಕ್ಕಳಲ್ಲಿ ರಚನಾತ್ಮಕ ಕಲೆ ಬೆಳೆಸುತ್ತವೆ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಲು ಸಾಧ್ಯವಾಗುತ್ತದೆ. ಮಕ್ಕಳು ಬೇರೆ ಚಟುವಟಿಕೆಗಲ್ಲಿ ಭಾಗವಸಿ ಸಮಯ ವ್ಯರ್ಥ ಮಾಡದೆ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ಶುಲ್ಕ ಕಟ್ಟಿಸಿಕೊಂಡು ಬೇಸಿಗೆಯಲ್ಲಿ ಶಿಬಿರ ನಡೆಸುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಖಾಸಗಿ ಶಾಲೆಗಳಿಗಿಂತ ನಾವೇನು ಕಡಿಮೆ ಇಲ್ಲ ಎನ್ನುವಂತೆ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ. ಮಕ್ಕಳು ಬೇಸಿಗೆ ರಜೆಯಲ್ಲಿ ನೀರಿನಲ್ಲಿ ಆಟ ಆಡಲು ಹೋಗಿ ಅನಾಹುತಗಳು ಹೆಚ್ಚಾಗುತ್ತಿವೆ. ಅಂತಹ ಘಟನೆಗಳನ್ನು ತಡೆಯುವುದು ಶಿಬಿರದ ಉದ್ದೇಶ ಎಂದು ಕೈವಾರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಎಜಾಜ್ ಬೇಗ್ ತಿಳಿಸಿದರು.

ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಯೋಗ, ಕ್ರಾಪ್ಟ್, ಮುನರಂಜನೆ ಆಟಗಳು, ಪ್ರಬಂಧ ಸ್ಪರ್ಧೆ ಮುಂತಾದ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಗುತ್ತದೆ ಎಂದರು.

ಹಿರೇಕಟ್ಟಿಗೆನಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್ ಪ್ರಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಶ್ರೀಧರ್ ಹಿರೇಮಠ್, ಚಂದ್ರಪ್ಪ, ವಿಜಯಲಕ್ಷ್ಮಿ, ಚೈತ್ರ, ಈಶ್ವರ್ ರೆಡ್ಡಿ, ಶಂಕರ, ಪೋಷಕರು, ಅಡುಗೆ ಸಹಾಯಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1875858444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.