ಕಲಬುರಗಿ: ‘ಕಲಬುರಗಿಯಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಅರಿವನ್ನು ಬಿತ್ತಿದವರು ಬಿ.ಶ್ಯಾಮಸುಂದರ್’ ಎಂದು ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್ ಹೇಳಿದರು.

ನಗರದ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಡಾ.ಅಂಬೇಡ್ಕರ್ ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಡಾ.ಅಂಬೇಡ್ಕರ್ ವಿಚಾರ ವೇದಿಕೆಯ ಸಮಾರೋಪ ಸಮಾರಂಭದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿ.ಶ್ಯಾಮಸುಂದರ್ ಮೂಲತಃ ಔರಂಗಾಬಾದ್ನವರು. ನಂತರ ಹೈದರಾಬಾದ್ನಲ್ಲಿ ನೆಲೆಸಿ ನಿಜಾಮ ಸಂಸ್ಥಾನದಲ್ಲಿ ಉನ್ನತ ಅಧಿಕಾರಿಯಾಗಿದ್ದವರು. ಅವರು ಭೀಮಸೇನೆಯನ್ನು ಕಟ್ಟಿ ಕಲಬುರಗಿ ಭಾಗದಲ್ಲಿ ಅಂಬೇಡ್ಕರ್ ವಿಚಾರಗಳನ್ನು ಪರಿಚಯಿಸಿದರು. ನಾವು ಅವರ ಭಾಷಣಗಳನ್ನು ಕೇಳುತ್ತಾ ಡಾ.ಅಂಬೇಡ್ಕರ್ ಬಗೆಗೆ ತಿಳಿದುಕೊಂಡೆವು. ನೀವು ಡಾ.ಅಂಬೇಡ್ಕರ್ ಕಾಲೇಜಿನ ಮೂಲಕ ಬಾಬಾ ಸಾಹೇಬರ ಬಗ್ಗೆ ತಿಳಿದುಕೊಳ್ಳಬೇಕು’ ಎಂದು ಅವರು ಹೇಳಿದರು.

ಎಂಜಿನಿಯರ್ ಮಲ್ಲಿಕಾರ್ಜುನ ಬಳತೆ ಕಾರ್ಯಕ್ರಮ ಉದ್ಘಾಟಿಸಿದರು.

ಕೆ.ಪಿ.ಇ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಶೀಲವಂತ ಮಾತನಾಡಿ, ‘ಇಂದು ಜಗತ್ತಿನಾದ್ಯಂತ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ. ಜಗತ್ತಿನ ನೂರಕ್ಕಿಂತ ಹೆಚ್ಚು ದೇಶಗಳು ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸುತ್ತಿವೆ. ಅಂದರೆ ಅಂಬೇಡ್ಕರ್ ಅವರ ವ್ಯಕ್ತಿತ್ವ ಎಷ್ಟು ಉದಾತ್ತವಾಗಿತ್ತು ಎನ್ನುವುದನ್ನು ಇಂದಿನ ವಿದ್ಯಾರ್ಥಿಗಳು ಯೋಚಿಸಬೇಕು’ ಎಂದು ಹೇಳಿದರು.

ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಮತ್ತು ಡಾ.ಅಂಬೇಡ್ಕರ್ ವಿಚಾರ ವೇದಿಕೆಯ ಸಂಚಾಲಕ ಗಾಂಧೀಜಿ ಮೋಳಕೆರೆ ಸ್ವಾಗತಿಸಿದರು. ಕನ್ನಡ ವಿಭಾಗದ ವಸಂತ ವಿ. ನಾಶಿ ನಿರೂಪಿಸಿದರು. ಐಕ್ಯುಎಸಿ ನಿರ್ದೇಶಕ ಸಿದ್ಧಾರ್ಥ ಮದನಕರ್, ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ ಎಸ್.ಕಾಂತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯ ನಂತರ ಕಲಬುರಗಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಬಂದ 15 ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಷಣ, ಚರ್ಚೆ, ಪ್ರಬಂಧ, ಅಂಬೇಡ್ಕರ್ ಪರ ಗೀತೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ನಿರ್ಮಲಾ ಸಿರಗಾಪುರ, ಅರುಣ್ ಜೋಳದಕೂಡ್ಲಿಗಿ, ಶಿವಕುಮಾರ್, ದತ್ತೂರಾಯ, ಹರ್ಷವರ್ಧನ್, ಕರಿಬಸಪ್ಪ, ಅರುಣ್ ಕುಮಾರ್, ಶಿಲ್ಪಾ, ಕೌಶಲ್ಯಾ, ಗ್ರಂಥಪಾಲಕ ರಮೇಶ ಜಾಬನೂರು, ಗ್ರಂಥ ಸಹಾಯಕಿ ಶೃತಿ, ದೊಡ್ಡ ಲಕ್ಷ್ಮಿ, ಮಂಜುಳಾ ಉಪಸ್ಥಿತರಿದ್ದರು. ಸುದರ್ಶನ ಮದನಕರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-34-529502857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.