ಕಲಬುರಗಿ: ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಿಸಲಾಯಿತು.

ಮುಖ್ಯ ಅತಿಥಿ ಹಾಗೂ ಹೈದರಾಬಾದ್ ವಿಶ್ವವಿದ್ಯಾಲಯದ ರಾಜಕೀಯ ವಿಭಾಗದ ಪ್ರಾಧ್ಯಾಪಕ ಪ್ರೊ.ಅನ್ಷುಮನ್ ಬೆಹರಾ ಮಾತನಾಡಿ, ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನ್ಯಾಯ ವಂಚಿತರಿಗೆ ಸಾಮಾಜಿಕ ನ್ಯಾಯ ಒದಗಿಸುವ, ಜಾತಿ ತಾರತಮ್ಯ ಹೋಗಲಾಡಿಸಲು ಸಂವಿಧಾನ ರಚನೆ, ಚುನಾವಣೆ ಸುಧಾರಣೆ ಸೇರಿದಂತೆ ಹಲವಾರು ರೀತಿಯಲ್ಲಿ ಇಡೀ ದೇಶದ ಅಭಿವೃದ್ದಿಗಾಗಿ ಶ್ರಮಿಸಿ, ನಮಗೆಲ್ಲರಿಗೂ ಸಂವಿಧಾನವನ್ನು ನೀಡಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ’ ಎಂದರು.

‘ಅವರು ನೀಡಿದ ಕೊಡುಗೆ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ. ನಾವೆಲ್ಲರೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಅನುಸರಿಸೋಣ’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ನಾಲ್ಕು ಸಂವಿಧಾನದ ಆಧಾರಸ್ತಂಭಗಳನ್ನು ನೀಡಿದ್ದಾರೆ. ದೇಶಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ಅವರ ಕೊಡುಗೆಯಿಂದಲೇ ನಮ್ಮ ದೇಶ ಹಾಗೂ ನಾವೆಲ್ಲರೂ ಸುಭದ್ರವಾಗಿದ್ದೇವೆ’ ಎಂದರು.

ಪ್ರಭಾರ ಕುಲಸಚಿವ ಪ್ರೊ.ಚೆನ್ನವೀರ ಆರ್.ಎಂ ಮಾತನಾಡಿದರು.

ಕಾರ್ಯಕ್ರಮ ಸಂಯೋಜಕ ಪ್ರೊ.ದೇವರಾಜಪ್ಪ ಎಸ್. ಸ್ವಾಗತಿಸಿದರು. ಪ್ರೊ.ಪಾಂಡುರಂಗ, ಡಾ.ಭರತ್, ಡಾ.ರಾಜಶ್ರೀ, ಡಾ.ಒಯಿನಂ, ಡಾ.ಬಾಬು, ಡಾ.ಅಲೋಕ್ ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಗೀತ ವಿಭಾಗದ ವಿದ್ಯಾರ್ಥಿನಿ ಅಶ್ವಿನಿ ರಾಷ್ಟ್ರಗೀತೆ ಹಾಡಿದರು. ಡಾ.ಜೈಪಾಲ್ ರಾಠೋಡ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-1029543368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.