ಕಲಬುರಗಿ: ಭಾರತ ಸಂವಿಧಾನ ಬರೆಯುವ ಮೂಲಕ ಶತಮಾನಗಳಿಂದ ವಿದ್ಯೆ, ಆಸ್ತಿ, ಅಧಿಕಾರ, ಮತಾಧಿಕಾರಗಳಿಂದ ವಂಚಿತವಾಗಿದ್ದ ಮಹಿಳಾ ಸಮುದಾಯಕ್ಕೆ ಪುರುಷರಿಗೆ ಸರಿಸಮಾನವಾದ ಎಲ್ಲ ಹಕ್ಕುಗಳನ್ನು ನೀಡಿ ಸಮಸಮಾಜದ ಪ್ರಜಾಪ್ರುಭುತ್ವವನ್ನು ಕಟ್ಟಿಕೊಡುವ ಮೂಲಕ ಮುಖ್ಯವಾಹಿನಿಗೆ ತಂದು ನಿಲ್ಲಿಸಿದ ಕೀರ್ತಿ ಡಾ.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಪಂಡಿತ ಮದಗುಣಕಿ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

‘ದೇಶದ ಅಭಿವೃದ್ಧಿ ಮಹಿಳೆಯರ ಅಭಿವೃದ್ಧಿಯ ಮೇಲೆ ಅಳತೆ ಮಾಡುತ್ತೇನೆ ಎಂದು ಹೇಳಿದ ಹಾಗೂ ಮಹಿಳೆಯರ ಸಮಾನತೆಗಾಗಿ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ ದೇಶದ ಏಕೈಕ ರಾಜಕಾರಣಿ ಡಾ.ಬಿ.ಆರ್.ಅಂಬೇಡ್ಕರ್ ಅವರು. ಮಹಿಳೆಯರ ಇಡೀ ಸ್ವಾಭಿಮಾನದ ಬದುಕಿಗೆ ಭದ್ರ ಅಡಿಪಾಯವನ್ನು ಹಾಕಿದ ಮಹಾಮಾನವತಾವಾದಿಯಾಗಿದ್ದಾರೆ’ ಎಂದು ತಿಳಿಸಿದರು.

ಮಹಾವಿದ್ಯಾಲಯ ಪ್ರಾಚಾರ್ಯೆ ಸೀಮಾ ಪಾಟೀಲ ಮಾತನಾಡಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-2056903133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.