ಕಲಬುರಗಿ: ‘ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಮುಖವಾಡದಲ್ಲಿ ಕನ್ನಡ ಕಿತ್ತು ಹಾಕಿ ಇಂಗ್ಲಿಷ್ ಹೇರುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿ’ ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಖಂಡನೆ ವ್ಯಕ್ತಪಡಿಸಿದೆ.

‘ರಾಜ್ಯದ 4,404 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲು ರಾಜ್ಯ ಸರ್ಕಾರವು ಆದೇಶಿಸಿದೆ. ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರಿ ಶಾಲೆ ಶಿಕ್ಷಕರಿಗೆ ಆಂಗ್ಲ ಮಾಧ್ಯಮ ತರಬೇತಿ ನೀಡಲಾಗುತ್ತಿದೆ. ಸರ್ಕಾರವು ಇದನ್ನು ದ್ವಿಭಾಷಾ ಮಾಧ್ಯಮ ಎಂದು ಕರೆಯುತ್ತಿದ್ದರೂ ಇಂಗ್ಲಿಷಿನಲ್ಲೇ ಪಾಠ ಮಾಡಬೇಕೆಂದು ಹಲವೆಡೆ ಶಿಕ್ಷಕರಿಗೆ ನಿರ್ದೇಶನ ನೀಡಲಾಗುತ್ತಿದೆ. ಕೆಲವು ಶಾಲೆಗಳಲ್ಲಿ ಜೂನ್ನಿಂದ ಕನ್ನಡ ಮಾಧ್ಯಮ ಇರುವುದಿಲ್ಲ. ಬದಲಿಗೆ ಕೇವಲ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ನೀಡಲಾಗುವುದೆಂದು ಪಾಲಕರಿಗೆ ತಿಳಿಸಲಾಗಿದೆ. ಇದು ಅಕ್ಷಮ್ಯ’ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಮಗುವಿನ ಸಮರ್ಪಕ ಬೌದ್ಧಿಕ ಮತ್ತು ಮಾನಸಿಕ ವಿಕಾಸಕ್ಕೆ ಕನಿಷ್ಠ 5ನೇ ತರಗತಿವರೆಗೂ ಮಾತೃಭಾಷೆಯಲ್ಲಿ ಶಿಕ್ಷಣ ದೊರೆಯಬೇಕು. ಸಂವಹನದ ಭಾಷೆಯೇ ಕಲಿಕೆಯ ಭಾಷೆಯಾದಾಗ ಮಗುವು ತನ್ನ ಭಾವನೆಯನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಮತ್ತು ವಿಷಯಗಳನ್ನು ಗ್ರಹಿಸಲು ಸಹಾಯಕವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯ. ಈ ಅಭಿಪ್ರಾಯವನ್ನು ಸರ್ಕಾರ ಗಾಳಿಗೆ ತೂರಿದೆ. ಕೂಡಲೇ ಈ ಅವೈಜ್ಞಾನಿಕ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ನಾಡಿನ ವಿದ್ಯಾರ್ಥಿಗಳು, ಯುವಜನರು, ಪೋಷಕರು, ಸಾಹಿತಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಕನ್ನಡವನ್ನು ರಕ್ಷಿಸಲು ಧ್ವನಿಯೆತ್ತಬೇಕೆಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-34-991707118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.